ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಅಂಧ ಮಕ್ಕಳಿಗೆ ಮತ್ತು ಬಡವರಿಗೆ ಆಹಾರ ಕಿಟ್ ವಿತರಣಾ ಸಮಾರಂಭವನ್ನು ಮೌರ್ಯ ಹೋಟೆಲು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು .
ಮಾಜಿ ಕ.ವಿ.ಕಾ.ಅಧ್ಯಕ್ಷರಾದ ಎಸ್.ಮನೋಹರ್ ,ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜಯಸಿಂಹ ಮತ್ತು ಬೆಂಗಳೂರು ನಗರ ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜನಾರ್ಧನ್ ರವರು ,ಕಾಂಗ್ರೆಸ್ ಮುಖಂಡರಾದ ಆದಿತ್ಯ, ರವಿಶೇಖರ್ ಪುಟ್ಟರಾಜು ,ಶೇಖರ್ ರವರು ಆಹಾರ ಕಿಟ್ ಗಳನ್ನು ವಿತರಿಸಿದರು.

ದಿ.ಪುನೀತ್ ರಾಜ್ ಕುಮಾರ್ ಅಭಿನಯದ ಚಲನಚಿತ್ರಗಳನ್ನು ಹಾಡಿ ಗೀತ ನಮನ ಸಲ್ಲಿಸಲಾಯಿತು

ಎಸ್.ಮನೋಹರ್ ರವರು ಮಾತನಾಡಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರು ಅವರ ಚಲನಚಿತ್ರಗಳಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾಂದಿಯಾದರು.
ಉಚಿತ ವೃದ್ದಾಶ್ರಮ ,ಶಾಲೆ ಮತ್ತು ಗೋಶಾಲೆ ಸ್ಥಾಪನೆ ಮಾಡಿದರು.
ತಮ್ಮ ಸಾವಿನಲ್ಲು ಎರಡು ಕಣ್ಣುಗಳನ್ನು ನೇತ್ರದಾನ ಮಾಡಿ ಅಂಧರ ಬಾಳಿಗೆ ಬೆಳಕಾದರು .
ದಿ.ಪುನೀತ್ ರಾಜ್ ಕುಮಾರ್ ರವರ ಸ್ಮರಣಾರ್ಥ ಪದ್ಮಶ್ರೀ ಪುಶಸ್ತಿ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *