ಕಾರ್ಯಕ್ರಮ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ,
ಅಭಿಯೋಜನೆ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಹಿಳಾ
ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರುಗಳ
ಸಂಯುಕ್ತಾಶ್ರಯದಲ್ಲಿ ಪ್ಯಾನ್ ಇಂಡಿಯಾ ಅವೇರ್‍ನೆಸ್ ಅಂಡ್
ಔಟ್‍ರೀಚ್ ಕಾರ್ಯಕ್ರಮದ ಅಂಗವಾಗಿ ಫಲಾನುಭವಿಗಳಿಗೆ ಸರ್ಕಾರಿ
ಸೌಲಭ್ಯಗಳು ಹಾಗೂ ಕಲ್ಯಾಣ ಯೋಜನೆಗಳ ವಿತರಣೆಯ ಬೃಹತ್
ಮೇಳ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮವನ್ನು
ನ.12 ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಶಿಕ್ಷಣ
ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ
ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ
ನ್ಯಾಯಾಧೀಶರಾದ ರಾಜೇಶ್ವರಿ ಎನ್ ಹೆಗಡೆ ಅವರು
ಉದ್ಘಾಟಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಪಿ. ಬಸವರಾಜ
ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ
ನ್ಯಾಯಾಧೀಶ ಜೆ.ವಿ.ವಿಜಯಾನಂದ, 2ನೇ ಹೆಚ್ಚುವರಿ ಜಿಲ್ಲಾ ಮತ್ತು
ಸತ್ರ ನ್ಯಾಯಾಧೀಶ ಶ್ರೀಪಾದ್.ಎನ್, ಕೌಟುಂಬಿಕ ನ್ಯಾಯಾಲಯ
ನ್ಯಾಯಾಧೀಶ ದಶÀರಥ.ಬಿ, ಪ್ರಧಾನ ಹಿರಿಯ ಸಿವಿಲ್
ನ್ಯಾಯಾಧೀಶರು ಹಾಗೂ ಸಿಜೆಎಂ ಪ್ರೀತಿ ಸದರ ಜೋಷಿ, ಹಿರಿಯ ಸಿವಿಲ್
ನ್ಯಾಯಾಧೀಶ ಪ್ರವೀಣ್ ನಾಯಕ್, ಮಹಿಳಾ ಮತ್ತು ಮಕ್ಕಳ
ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್.ಕೆ.ಹೆಚ್, ಸರ್ಕಾರಿ
ಅಭಿಯೋಜಕ ಎಸ್.ವಿ.ಪಾಟೀಲ್, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ
ಉಪನಿರ್ದೇಶಕರು(ಅಭಿವೃದ್ಧಿ) ಲಿಂಗರಾಜು.ಹೆಚ್.ಕೆ, ಸಾರ್ವಜನಿಕ ಶಿಕ್ಷಣ
ಇಲಾಖೆ ಉಪನಿರ್ದೇಶಕ ತಿಪ್ಪೇಶಪ್ಪ.ಜಿ.ಆರ್ ಸೇರಿದಂತೆ ಎಲ್ಲಾ
ನ್ಯಾಯಾಧೀಶರು ಹಾಗೂ ಸರ್ಕಾರಿ ಅಭಿಯೋಜಕರು ಮತ್ತು ಎಲ್ಲಾ
ಪ್ಯಾನಲ್ ವಕೀಲರುಗಳು ಆಗಮಿಸುವರು.
ಕಾರ್ಯಕ್ರಮದಲ್ಲಿ ಹಿರಿಯ ವಕೀಲರಿಂದ ವಿವಿಧ ವಿಷಯಗಳ
ಕುರಿತು ವಿಚಾರಗೋಷ್ಟಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ
ತಿಳಿಸಿದೆ.