ದಿನಾಂಕ 14-11-21 ರಂದು ಭಾನುವಾರ ಬೆಳಿಗ್ಗೆ 10.00 ಗಂಟೆಗೆ ಐತಿಹಾಸಿಕ ಕಾಂಗ್ರೆಸ್ ಪಕ್ಷದ “ಸದಸ್ಯತ್ವ ಅಭಿಯಾನ ” ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಉದ್ಘಾಟನೆಯನ್ನು ಎಐಸಿಸಿ ಪ್ರದಾನ ಕಾರ್ಯದರ್ಶಿಗಳು – ರಾಜ್ಯ ಉಸ್ತುವಾರಿಯಾದ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲ ರವರು ಮಾಡಲಿದ್ದಾರೆ, ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷರು ಶ್ರೀ ಡಿ.ಕೆ. ಶಿವಕುಮಾರ್ ರವರು ವಹಿಸಲಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಶ್ರೀ ಸಿದ್ದರಾಮಯ್ಯ ರವರು ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ ಎಸ್ ಆರ್ ಪಾಟೀಲ್ ರವರು, ಕೆಪಿಸಿಸಿ ಕಾರ್ಯಧ್ಯಕ್ಷರುಗಳು, ಸಿಡಬ್ಲ್ಯೂಸಿ ಸದಸ್ಯರು, ಎಐಸಿಸಿ ಪದಾಧಿಕಾರಿಗಳು ಹಾಗೂ ಇತರ ಹಿರಿಯ ಮುಖಂಡರುಗಳು ಭಾಗವಹಿಸಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರುಗಳು, ಹಾಗೂ ರಾಜ್ಯ ಪದಾಧಿಕಾರಿಗಳು, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ವಿನಂತಿಸುತ್ತೇನೆ.
ಸ್ಥಳ : ಗಾಯತ್ರಿ ವಿಹಾರ್, ಗೇಟ್ ನಂಬರ್ 4, ಬಳ್ಳಾರಿ ರಸ್ತೆ – ಪ್ಯಾಲೇಸ್ ಗ್ರೌಂಡ್, ಬೆಂಗಳೂರು.
ಎಂ.ಡಿ.ಲಕ್ಷ್ಮೀನಾರಾಯಣ (ಅಣ್ಣಯ್ಯ) ಮಾಜಿ ಶಾಸಕರು ತುರುವೇಕೆರೆ ಕ್ಷೇತ್ರ ಅಧ್ಯಕ್ಷರು ಹಿಂದುಳಿದ ವರ್ಗಗಳ ವಿಭಾಗ.