ರಾಜ್ಯ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.
ಬಸವರಾಜ ಅವರು ನ. 18 ರಂದು ದಾವಣಗೆರೆ ಪ್ರವಾಸ
ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಹಿರಿಯೂರಿನಿಂದ ಹೊರಟು, ಬೆ. 9-30
ಗಂಟೆಗೆ ದಾವಣಗೆರೆಗೆ ಆಗಮಿಸಿ, ಜಿಎಂಐಟಿ ಅತಿಥಿ ಗೃಹಕ್ಕೆ
ತೆರಳುವರು. ಬೆಳಿಗ್ಗೆ 11 ಗಂಟೆಗೆ ಪಕ್ಷದ ವತಿಯಿಂದ
ಆಯೋಜಿಸಲಾಗಿರುವ ಜನಸ್ವರಾಜ್ ಯಾತ್ರೆ ಕಾರ್ಯಕ್ರಮದಲ್ಲಿ
ಭಾಗವಹಿಸುವರು. ಸಚಿವರು ಮಧ್ಯಾಹ್ನ 2 ಗಂಟೆಗೆ
ಚಿತ್ರದುರ್ಗಕ್ಕೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ
ತಿಳಿಸಿದ್ದಾರೆ.