ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಮತ್ತು ರಾಜ್ಯ
ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಾವಣಗೆರೆ
ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಡಿ.18 ರಂದು ರಾಷ್ಟ್ರೀಯ
ಲೋಕ್ ಅದಾಲತ್ ಆಯೋಜಿಸಲಾಗಿದೆ.
       ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು
ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ
ಮಾಡಿಕೊಡಬೇಕೆಂದು ಉದ್ದೇಶಿಸಲಾಗಿದೆ. ಹೀಗಾಗಿ ದಾವಣಗೆರೆ ಜಿಲ್ಲಾ
ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಗಳಲ್ಲಿರುವ
ಎಲ್ಲಾ ನ್ಯಾಯಾಲಯಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಲೋಕ್
ಅದಾಲತ್‍ನ್ನು ಆಯೋಜಿಸಲಿವೆ.
ಈ ಲೋಕ್ ಅದಾಲತ್‍ನಲ್ಲಿ  ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ
ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ

ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ
ಕಲ್ಪಿಸಿಕೊಡಲಾಗಿದೆ. ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್
ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ
ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ
ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು,
ಎಂ.ಎಂ.ಡಿ.ಆರ್. ಕಾಯ್ದೆಯಡಿಯ ಪ್ರಕರಣಗಳನ್ನು ಲೋಕ್
ಅದಾಲತ್‍ನಲ್ಲಿ ಪರಿಹರಿಸಿಕೊಳ್ಳಬಹÅದು. ಕೌಟುಂಬಿಕ ನ್ಯಾಯಾಲಯದ
ಪ್ರಕರಣಗಳು(ವಿಚ್ಛೇಧನ ಹೆÇರತುಪಡಿಸಿ), ಪಿಂಚಣಿ
ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು,
ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ,
ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ
ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹÅದು.
ಸಾರ್ವಜನಿಕರು ರಾಷ್ಟ್ರೀಯ ಲೋಕ್ ಅದಾಲತ್‍ನ ಸಂಪೂರ್ಣ
ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಹೆಚ್ಚಿನ
ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ದಾವಣಗೆರೆ ಇವರನ್ನು ದೂ.ಸಂ:
08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ
ದೂ.ಸಂಃ 08192-296885, ಹೆÇನ್ನಾಳಿ ದೂ.ಸಂ: 08188-251732, ಚನ್ನಗಿರಿ
ದೂ.ಸಂ: 08189-229195 ಮತ್ತು ಜಗಳೂರು ದೂ.ಸಂ: 08196-227600
ಇವರನ್ನು ಸಂಪರ್ಕಿಸಬಹÅದೆಂದು ಹಿರಿಯ ಸಿವಿಲ್ ನ್ಯಾಯಾಧೀಶರು
ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ
ಕಾರ್ಯದರ್ಶಿಗಳಾದ ಪ್ರವೀಣ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *