ಜಿಲ್ಲೆಯಲ್ಲಿ ನ.17 ರಂದು 10 ಮಿ.ಮೀ ಸರಾಸರಿ ಮಳೆಯಾಗಿದ್ದು,
ಒಟ್ಟು ರೂ.75.48 ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ.
ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 135 ಎಕರೆ ಭತ್ತ, 2 ಎಕರೆ
ಬಾಳೆ ಮತ್ತು 10 ಎಕರೆ ಮೆಕ್ಕೆಜೋಳದ  ಬೆಳೆ  ಹಾನಿಯಾಗಿದ್ದು
ರೂ.6.50 ಲಕ್ಷ. ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 787 ಎಕರೆ ಭತ್ತ, 2
ಎಕರೆ ರಾಗಿ ಬೆಳೆ ಹಾನಿಯಾಗಿದ್ದು, ರೂ. 48.33 ಲಕ್ಷ. ಹೊನ್ನಾಳಿ 
ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಿಂದ ರೂ. 3 ಲಕ್ಷ
ಮತ್ತು 2 ಪಕ್ಕಾ ಮನೆ ಭಾಗಶ: ಹಾನಿಯಿಂದ ರೂ. 1.30 ಲಕ್ಷ ಸೇರಿ ಒಟ್ಟು
ರೂ.4.30 ಲಕ್ಷ ನಷ್ಟದ ಅಂದಾಜು ಮಾಡಲಾಗಿದೆ.
ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ
ಹಾನಿಯಾಗಿದ್ದು, ರೂ.1 ಲಕ್ಷ ಮತ್ತು 6 ಪಕ್ಕಾ ಮನೆ ಭಾಗಶ:
ಹಾನಿಯಗಿದ್ದು, ರೂ.3 ಲಕ್ಷ, 1 ದನದ ಕೊಟ್ಟಿಗೆ ಹಾನಿಯಾಗಿದ್ದು,
ರೂ.0.15 ಲಕ್ಷ ಮತ್ತು  7 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು,
ರೂ.3 ಲಕ್ಷ ಒಟ್ಟು ರೂ.7.15 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ
ಹಾನಿಯಾಗಿದ್ದು, ರೂ.3 ಲಕ್ಷ, 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು,
ರೂ.1.20 ಲಕ್ಷ ಮತ್ತು 2 ಕಚ್ಚಾ ಮನೆ ತೀವ್ರಹಾನಿಯಾಗಿದ್ದು
ರೂ.3.00 ಲಕ್ಷ, ಒಟ್ಟು 7.20 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ
ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿಗಳು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *