ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿಯವರು ಶಿವಮೊಗ್ಗ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆರ್ ಪ್ರಸನ್ನ ಕುಮಾರ್ ಅವರನ್ನು ಆಯ್ಕೆ ಮಾಡಿ ಆದೇಶಿಸಿರುವ ಹಿನ್ನೆಲೆಯಲ್ಲಿ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ಮತ್ತು ವಿಧಾನ ಪರಿಷತ್ ಚುನಾವಣೆ ಸಾಮಾಜಿಕ ಜಾಲತಾಣದ ಉಸ್ತುವಾರಿಯಾಗಿ ಆಯ್ಕೆಯಾದ ಶ್ರೀಮತಿ ಸೌಗಂಧಿಕಾ ರಘುನಾಥರವರು ಕೂಡ ವಿಧಾನಪರಿಷತ್ ಚುನಾವಣೆಗೆ ಆಯ್ಕೆಯಾದ ಆರ್ ಪ್ರಸನ್ನ ಕುಮಾರ್ ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ.