ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.26
ರ ಶುಕ್ರವಾರ ದಾವಣಗೆರೆಗೆ ಭೇಟಿ ನೀಡಲಿದ್ದಾರೆ.
ಮುಖ್ಯಮಂತ್ರಿಗಳು ನ.26 ರ ಬೆಳಿಗ್ಗೆ ಬೆಂಗಳೂರಿನಿಂದ ಹೊರಟು
ತುಮಕೂರು-ಚಿತ್ರದುರ್ಗ ಮಾರ್ಗವಾಗಿ ಬೆಳಿಗ್ಗೆ 10.30 ಕ್ಕೆ
ದಾವಣಗೆರೆಗೆ ಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ನಗರದ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂವಿಧಾನ ದಿವಸ ಆಚರಣೆ ಅಂಗವಾಗಿ
ಭಾರತ ಸಂವಿಧಾನದ ಪ್ರಸ್ತಾವನೆ ಓದುವ ಕಾರ್ಯಕ್ರಮದಲ್ಲಿ
ಭಾಗವಹಿಸುವರು.
ಅಂದು ಬೆಳಿಗ್ಗೆ 11.30 ಕ್ಕೆ ನಗರದ ಹದಡಿ ರಸ್ತೆಯಲ್ಲಿರುವ
ಎಸ್.ಎಸ್.ಕಲ್ಯಾಣ ಮಂಟಪದಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ
ಶಾಸಕರಾದ ಎಸ್.ಎ.ರವೀಂದ್ರನಾಥ್ ಅವರ ಅಮೃತ ಮಹೋತ್ಸವ
ಅಭಿನಂದನಾ ಸಮಾರಂಭ ಮತ್ತು ಎಸ್.ಎ.ಆರ್ ಕುರಿತ ‘ಕೃಷಿ ಕಣ್ಮಣಿ’
ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸುವರು.
ಮುಖ್ಯಮಂತ್ರಿಗಳು ಅದೇ ದಿನ ಮಧ್ಯಾಹ್ನ 3 ಗಂಟೆಗೆ
ಚಿತ್ರದುರ್ಗಕ್ಕೆ ತೆರಳುವರು ಎಂದು ಮುಖ್ಯಮಂತ್ರಿಗಳ
ವಿಶೇಷ ಕರ್ತವ್ಯಧಿಕಾರಿ ತಿಳಿಸಿದ್ದಾರೆ.