ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ
ನಿಗಮದಿಂದ 2021-22ನೇ ಸಾಲಿಗೆ ಯೋಜನೆಗಳ ಅನುಷ್ಠಾನಕ್ಕಾಗಿ
(ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ/ಅರೆ
ಅಲೆಮಾರಿ, ಒಕ್ಕಲಿಗ, ಲಿಂಗಾಯುತ, ಕಾಡುಗೊಲ್ಲ, ಹಟ್ಟಿ ಗೊಲ್ಲ,
ಮರಾಠ ಮತ್ತು ಇದರ ಉಪ ಸಮುದಾಯಗಳನ್ನು
ಹೊರತುಪಡಿಸಿ) ಹಿಂದುಳಿದ ವರ್ಗಗಳ ಅರ್ಜಿದಾರರುಗಳಿಂದ
ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ (ಖeಟಿeತಿಚಿಟ) ಸುವಿಧಾ
ತಂತ್ರಾಂಶದ ಮುಖಾಂತರ ಔಟಿಟiಟಿe ನಲ್ಲಿ ಅರ್ಜಿ ಸಲ್ಲಿಸುವುದು)
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ
ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಈಗಾಗಲೇ ಕಳೆದ
ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ
ಪಡೆದು 2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ
ಮುಂದುವರೆದ ಕಂತುಗಳಿಗೆ (3-4-5ನೇ ಕಂತುಗಳು)
ಸುವಿಧಾ ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು
ಸಲ್ಲಿಸಲುಬಹುದಾಗಿದ್ದು, ವಿದ್ಯಾರ್ಥಿಗಳು ಆಧಾರ್ ಕಾರ್ಡ್
ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯೊಂದಿಗೆ
hಣಣಠಿs://ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ
ಯೋಜನೆ (ಔಜಿಜಿ ಐiಟಿe)ಈ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲು
ಬಯಸುವ ಹಿಂದುಳಿದ ವರ್ಗಗಳ ಸಮುದಯದವರು
ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ
ರೂ. 2.00 ಲಕ್ಷಗಳ ವರೆಗೆ ಆರ್ಥಿಕ ನೆರವುವನ್ನು
ಒದಗಿಸಲಾಗುತ್ತಿದ್ದು, ಇದರಲ್ಲಿ ಗರಿಷ್ಠ ಶೇ. 15 ರಷ್ಟು
ಸಹಾಯಧನ, ಉಳಿಕ ಮೊತ್ತ ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ
ಸಾಲವನ್ನು ಪಡೆಯಬಹುದಾಗಿರುತ್ತದೆ. ಅರ್ಜಿದಾರರುಗಳು
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ
ಸೇರಿದವರಾಗಿರಬೇಕು. ಅರ್ಜಿ ನಮೂನೆಗಳನ್ನು ನಿಗಮದ
ವೆಬ್‍ಸೈಟ್‍ನಲ್ಲಿ ಹಾಗೂ ಉಚಿತವಾಗಿ ಜಿಲ್ಲಾ ಕಚೇರಿಯಲ್ಲಿ
ಪಡೆಯಬಹುದು.
ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ
ವರ್ಗದ ಅರ್ಜಿದಾರರು ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ
ಕಚೇರಿಗಳನ್ನು ಹಾಗೂ ನಿಗಮದ ವೆಬ್‍ಸೈಟ್
ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಹಾಗೂ ದೂ.ಸಂ: 08192-230934ನ್ನು
ಸಂಪರ್ಕಿಸಬಹುದು. ಅರ್ಜಿಗಳನ್ನು ನ.29 ರಿಂದ ಪಡೆದು ಭರ್ತಿ
ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜನವರಿ 10,
2022ರೊಳಗೆ ಕಚೇರಿಗೆ ಸಲ್ಲಿಸಬೇಕೆಂದು ಡಿ.ದೇವರಾಜ ಅರಸು
ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.