ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2021-22ನೇ
ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸಾಂಪ್ರದಾಯಿಕ
ವೃತ್ತಿದಾರರ ಸಾಲ ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದ
ವರ್ಗಗಳ ಪ್ರವರ್ಗ-2ಎ ರಲ್ಲಿನ ಸವಿತಾ ಮತ್ತು ಅದರ ಉಪಜಾತಿಗೆ
ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಸರ್ಕಾರದ ಆದೇಶದನ್ವಯ ಪ್ರವರ್ಗ-2ಎ ರಲ್ಲಿ
ಬರುವ ಸವಿತಾ ಮತ್ತು ಅದರ ಉಪಜಾತಿಗೆ
ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ
ಗ್ರಾಮಾಂತರ ಪ್ರದೇಶದವರಿಗೆ 98,000 ರೂ.ಗಳು, ಪಟ್ಟಣ
ಪ್ರದೇಶದವರಿಗೆ 1,20,000 ರೂ. ಒಳಗಿರಬೇಕು. ಅರ್ಜಿದಾರರ
ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.
ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ
ಬ್ಯಾಂಕ್ ಖಾತೆ ಹಾಗೂ ಜಾತಿ ಆದಾಯ ಪ್ರಮಾಣ ಪತ್ರÀದ
ಪ್ರತಿಯನ್ನು ಲಗತ್ತಿಸಬೇಕು. ಒಂದು ಬಾರಿ ನಿಗಮದ
ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ
ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ
ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು
ತಿರಸ್ಕರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ
ನಿಯಮಿತ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ
ನಿಗಮದ ಜಿಲ್ಲಾ ಕಚೇರಿ ಅಥವಾ ನಿಗಮದ
ವೆಬ್‍ಸೈಟ್ ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಸಂಪರ್ಕಿಸಬಹುದು.
ಅರ್ಜಿ ನಮೂನೆಯನ್ನು ನಿಗಮದ ವೆಬ್‍ಸೈಟ್‍ನಲ್ಲಿ ಹಾಗೂ
ಉಚಿತವಾಗಿ ಡಿ.01 ರಿಂದ ಜಿಲ್ಲಾ ಕಚೇರಿಯಲ್ಲಿ ಪಡೆಯಬಹುದು. ನಿಗದಿತ ಅರ್ಜಿ

ನಮೂನೆಗಳಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ 2022ರ
ಜ.10ರ ಸಂಜೆ 5:30 ರೊಳಗಾಗಿ ಸಲ್ಲಿಸಬೇಕು.
 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಿಗಮದ ಕಚೇರಿ ದೂರವಾಣಿ ಸಂಖ್ಯೆ
08192-230934 ಕ್ಕೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ
ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *