ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಡಿ.02 ಮತ್ತು
03 ರಂದು ಜಗಳೂರು, ಚನ್ನಗಿರಿ ತಾಲ್ಲೂಕು ಪ್ರವಾಸ
ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ತಮ್ಮ ದೂರುಗಳನ್ನು
ಸಲ್ಲಿಸಬಹುದು..
ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ
ಅವರು ಡಿ.02 ರಂದು ಜಗಳೂರು ಪ್ರವಾಸಿ ಮಂದಿರದಲ್ಲಿ, ಡಿ.03 ರಂದು
ಚನ್ನಗಿರಿ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ
1.30ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಸಾರ್ವಜನಿಕರು ತಮ್ಮ ದೂರು ಹಾಗೂ ಅಹವಾಲುಗಳನ್ನು
ಸಲ್ಲಿಸಬಹುದು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ ಅಂತಹ
ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ
ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪೂರೆ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.