ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ
ನಿಗಮದಿಂದ 2021-22ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ
ನವೀಕರಣ (ಆನ್‍ಲೈನ್), ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು
ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‍ಗಳ
ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ
ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ, ಮಹಿಳೆಯರಿಗೆ
ಮೈಕ್ರೋ ಕ್ರೆಡಿಟ್ ಸಾಲ ಯೋಜನೆ (ಆಫ್‍ಲೈನ್) ಗಳಿಗೆ ಅರ್ಜಿ
ಆಹ್ವಾನಿಸಲಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆ
ನವೀಕರಣಕ್ಕಾಗಿ hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದ ಮೂಲಕ ಅರ್ಜಿ
ಸಲ್ಲಿಸಬಹುದು. ಈ ಯೋಜನೆಗೆ ಸಂಬಂಧಿಸಿದಂತೆ ಸಲ್ಲಿಸಬೇಕಾಗಿರುವ
ದಾಖಲೆಗಳ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಜಿಲ್ಲಾ
ವ್ಯವಸ್ಥಾಪಕರ ಕಚೇರಿ ಅಥವಾ
ನಿಗಮದ hಣಣಠಿs://ಞvಛಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದಲ್ಲಿ ಪಡೆಯಬಹುದು.
ಆಫ್‍ಲೈನ್ ಮೂಲಕ ಸಲ್ಲಿಸಬೇಕಾಗಿರುವ ಯೋಜನೆಗಳಡಿ
ಸೌಲಭ್ಯ ಪಡೆಯಲು ಬಯಸುವ ಅರ್ಜಿದಾರರು ನಿಗಮದ ಕಚೇರಿ
ಹಾಗೂ ನಿಗಮದ ವೆಬ್‍ಸೈಟ್ ತಿತಿತಿ.ಞvಛಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಸಂಪರ್ಕಿಸಿ ಅರ್ಜಿ
ನಮೂನೆ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ
ಕಚೇರಿಗೆ ನೇರವಾಗಿ ಸಲ್ಲಿಸಬೇಕು.
ಹಿಂದುಳಿದ ವರ್ಗಗಳ ಪ್ರವರ್ಗ-2ಎ ಬರುವ ವಿಶ್ವಕರ್ಮ ಜಾತಿ
ಮತ್ತು ಅದರ ಉಪಜಾತಿಗಳಿಗೆ ಸೇರಿದವರಾಗಿರಬೇಕು. ಕುಟುಂಬದ
ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 40,000
ರೂ.ಗಳು ಪಟ್ಟಣ ಪ್ರದೇಶದವರಿಗೆ ರೂ.55,000 ರೂ.ಗಳ
ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ
ಮಿತಿಯಲ್ಲಿರಬೇಕು. ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಜೋಡಣೆಯಾದ
ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹಾಗೂ ಜಾತಿ ಆದಾಯ ಪ್ರಮಾಣ
ಪತ್ರÀದ ಪ್ರತಿಯನ್ನು ಲಗತ್ತಿಸಬೇಕು. ಒಂದು ಬಾರಿ ನಿಗಮದ
ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ
ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ
ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು
ತಿರಸ್ಕರಿಸಲಾಗುವುದು.
ಅರ್ಜಿ ನಮೂನೆಗಳನ್ನು ನಿಗಮದ ವೆಬ್‍ಸೈಟ್‍ನಲ್ಲಿ ಹಾಗೂ
ಉಚಿತವಾಗಿ ಡಿ.01 ರಿಂದ ಜಿಲ್ಲಾ ಕಚೇರಿಯಲ್ಲಿ ಪಡೆಯಬಹುದು. ನಿಗದಿತ ಅರ್ಜಿ
ನಮೂನೆಗಳಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ 2022ರ
ಜ.10 ರ ಸಂಜೆ 5.30 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಿಗಮದ ಕಚೇರಿ ದೂರವಾಣಿ ಸಂಖ್ಯೆ
08192-230934 ಕ್ಕೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ
ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.