ಬೇಲಿಮಲ್ಲೂರು ಕಾರ್ಯಕ್ಷೇತ್ರದಲ್ಲಿ ಶ್ರೀಉಮಾ ಪ್ರೌಢ ಶಾಲೆ ಯ ಮಕ್ಕಳಿಗೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ದಾವಣಗೆರೆ ಜಿಲ್ಲಾ ಜನ ಜಾಗ್ರತಿ ವೇದಿಕೆ ಅಧ್ಯಕ್ಷರಾದ ನಾಗರಾಜ್ ಕಾಕನೂರು sir ಮಕ್ಕಳಿಗೆ ದುಶ್ಚಟ ಮಾಡುವುದರಿಂದ ದೇಹದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸವಿತಾ ರವರು ವಹಿಸಿದ್ದರು. ಕಾರ್ಯಕ್ರಮದ ರೂಪು ರೆಷೆಗಳು, ಇದರ ಮಹತ್ವ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾನ್ಯ ತಾಲೂಕಿನ ಯೋಜನಾಧಿಕಾರಿಗಳಾದ ಬಸವರಾಜ್ ಅಂಗಡಿ ಯವರು ಪ್ರಾಸ್ತಾವಿಕ ಮಾತಿನಲ್ಲಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಪಾಧ್ಯಾಯರು ವಹಿಸಿದ್ದರು.