ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2021-22ನೇ
ಸಾಲಿನಲ್ಲಿ ವಿವಿಧ ಯೋಜನೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ
ಆಹ್ವಾನಿಸಲಾಗಿದೆ.   ಸುವಿಧಾ ತಂತ್ರಾಶದ ಮುಖಾಂತರ ಔಟಿಟiಟಿe ನಲ್ಲಿ ಅರ್ಜಿ
ಸ್ವೀಕರಿಸಲಾಗುವುದು.
     ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ (ಖeಟಿeತಿಚಿಟ) : ಕರ್ನಾಟಕ
ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ವ್ಯಾಪ್ತಿಗೆ  ಸೇರಿದ, ಈಗಾಗಲೇ
ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ (ನವೀಕರಣ) ಯೋಜನೆಯಡಿ
ಸೌಲಭ್ಯ ಪಡೆದ ವಿದ್ಯಾರ್ಥಿಗಳು 2021-22ನೇ ಸಾಲಿನ ವ್ಯಾಸಂಗ
ಮಾಡುತ್ತಿದ್ದಲ್ಲಿ ಮುಂದುವರೆದ ಕಂತುಗಳಿಗಾಗಿ (2ನೇ
ಕಂತುಗಳು) ‘ಸುವಿಧಾ ತಂತ್ರಾಂಶ’ದಲ್ಲಿ ಆನ್‍ಲೈನ್ ಮೂಲಕ ಅರ್ಜಿ
ಆಹ್ವಾನಿಸಲಾಗಿದೆ.
    ಅರ್ಜಿದಾರರು ಆಧಾರ್ ಕಾರ್ಡ್ ಜೋಡಣೆಯಾದ, ಚಾಲ್ತಿಯಲ್ಲಿರುವ
ಬ್ಯಾಂಕ್ ಖಾತೆ ಹೊಂದಿರಬೇಕು. 
ಅರ್ಜಿದಾರರು hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದಲ್ಲಿ ಅರ್ಜಿಯನ್ನು
ಸಲ್ಲಿಸಬಹುದು. ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಹಾಗೂ
ಸಲ್ಲಿಸಬೇಕಾಗಿರುವ ದಾಖಲೆಗಳ ಬಗ್ಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ
ಅಥವಾ ನಿಗಮದ hಣಣಠಿs://ಞmmಜ.ಞಚಿಡಿಟಿಚಿಣಚಿಞಚಿ.gov.iಟಿ. ಜಾಲತಾಣದಲ್ಲಿ ಮಾಹಿತಿ
ಪಡೆಯಬಹುದು. ಸಾಲ ಸೌಲಭ್ಯ ಪಡೆಯ ಬಯಸುವವರು
ಮಡಿವಾಳ ಸಮುದಾಯದ        ಪ್ರವರ್ಗ- 2ಎಗೆ ಸೇರಿದ ಮಡಿವಾಳ
ಮತ್ತು ಇದರ ಉಪಜಾತಿಗಳಿಗೆ (ಅಗಸ, ಚಕಲ, ಧೋಬಿ, ಮಡಿವಾಳ,
ಮನ್ನನ್, ಪರಿತ್, ರಾಜಕ, ಸಕಲ, ವನ್ನನ್, ವೆಲ್ಲುತೇಡನ್, ಸಾಕಲವಾಡು)
ಸೇರಿದವರಾಗಿರಬೇಕು.
    ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ ಸೌಲಭ್ಯ
ಪಡೆಯಬಯಸುವ ಮಡಿವಾಳ ಮತ್ತು ಇದರ ಉಪಜಾತಿಯವರ
ಕುಲಕಸುಬು/ ಸಾಂಪ್ರದಾಯಿಕ ವೃತ್ತಿದಾರರು ದೋಬಿ ಘಟಕ,
ಡ್ರೈಕ್ಲಿನಿಂಗ್ ಘಟಕಗಳ ಸ್ಥಾಪನೆ, ಇಸ್ತ್ರೀ ಮುಂತಾದ ವೃತ್ತಿ
ಕಸುಬುದಾರರು ತಮ್ಮ ವೃತ್ತಿಯ ಅಭಿವೃದ್ಧಿಗಾಗಿ, ಆಧುನಿಕ
ಉಪಕರಣಗಳನ್ನು ಖರೀದಿಸಲು, ತಾಂತ್ರಿಕತೆಯನ್ನು
ಮೇಲ್ದರ್ಜೆಗೇರಿಸಲು, ವೃತ್ತಿ ಅನುಸಾರ ಗರಿಷ್ಠ 2 ಲಕ್ಷ ರೂ. ಗಳ
ವರೆಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು, ಇದರಲ್ಲಿ ಗರಿಷ್ಠ
ಶೇ.15ರಷ್ಟು ಸಹಾಯಧನ, ಉಳಿಕೆ ಮೊತ್ತ ಶೇ.2ರ ಬಡ್ಡಿದರದಲ್ಲಿ
ಸಾಲ ಸೌಲಭ್ಯ ಒದಗಿಸಲಾಗುವುದು.
    ಸ್ವಯಂ ಉದ್ಯೋಗ ಸಾಲ ಯೋಜನೆ ಸೌಲಭ್ಯ ಪಡೆಯ
ಬಯಸುವವರು ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾವಲಯ

ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2 ಲಕ್ಷ ರೂ.ಗಳ ವರೆಗೆ
ಆರ್ಥಿಕ ನೆರವು ನೀಡಲಾಗುತ್ತಿದ್ದು, ಇದರಲ್ಲಿ ಗರಿಷ್ಠ ಶೇ.15ರಷ್ಟು
ಸಹಾಯಧನ ಉಳಿಕೆ ಮೊತ್ತ ವಾರ್ಷಿಕ ಶೇ4ರ ಬಡ್ಡಿದರದಲ್ಲಿ ಸಾಲ
ಸೌಲಭ್ಯ ಒದಗಿಸಲಾಗುವುದು.
    ಸ್ವ ಸಹಾಯ ಗುಂಪುಗಳ ಆರ್ಥಿಕ ನೆರವು  ಯೋಜನೆಯಡಿ
ಮಡಿವಾಳ ಸಮುದಾಯದ ಮಹಿಳೆಯರು ಕೈಗೊಳ್ಳುವ ಆರ್ಥಿಕ
ಚಟುವಟಿಕೆಗಳಿಗೆ ಸ್ವಸಹಾಯ ಗುಂಪುಗಳ ಒಟ್ಟು 15 ಸದಸ್ಯರಿಗೆ
ತಲಾ ರೂ.5,000/-ಗಳ ಸಹಾಯಧನ ಹಾಗೂ ತಲಾ ರೂ.15,000/-
ಗಳ ಸಾಲವನ್ನು ಶೇ.4ರಷ್ಟು ಬಡ್ಡಿದರದಲ್ಲಿ ಹೀಗೆ ಪ್ರತಿ ಗುಂಪಿಗೆ 
ರೂ.75,000/-ಗಳ ಸಹಾಯಧನ ಹಾಗೂ ರೂ.2,25,000/-ಗಳ ಸಾಲ
ಒಟ್ಟು ರೂ.3,00,000/-ಗಳನ್ನು ಸಾಲ ಸೌಲಭ್ಯ ಒದಗಿಸಲಾಗುವುದು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ
ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ
ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು
ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ
ನಮೂನೆಗಳನ್ನು ನಿಗಮದ ವೆಬ್‍ಸೈಟ್‍ನಲ್ಲಿ ಪಡೆಯಬಹುದು.
    ಸೌಲಭ್ಯ ಪಡೆಯಲು ಹೊಂದಿರಬೇಕಾದ
ಅರ್ಹತೆಗಳು :ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-2ಎಗೆ
ಸೇರಿದ ಮಡಿವಾಳ ಮತ್ತು ಇದರ ಉಪಜಾತಿಗೆ ಸೇರಿದವರಾಗಿರಬೇಕು.
ರಾಜ್ಯ ಸರ್ಕಾರದ ಯೋಜನೆಗಳಿಗೆ ಅವರ ಕುಟುಂಬದ ವಾರ್ಷಿಕ
ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು
ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು.
ಅರ್ಜಿದಾರರ ವಯಸ್ಸು 18 ರಿಂದ 55 ವರ್ಷ
ವಯೋಮಾನದಾವರಾಗಿರಬೇಕು. ಅರ್ಜಿದಾರರು ಕೆ.ವೈ.ಸಿ. ಬಗ್ಗೆ ಆಧಾರ್
ಕಾರ್ಡ್/ಚುನಾವಣಾ ಗುರುತಿನ ಚೀಟಿ/ಪಾನ್ ಕಾರ್ಡ್ ದಾಖಲೆಗಳನ್ನು
ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು. (ಅರ್ಜಿದಾರರು ಐ.ಎಫ್.ಎಸ್.ಸಿ.
ಕೋಡ್ ಹೊಂದಿರುವ ರಾಷ್ಟ್ರೀಕೃತ/ಗ್ರಾಮೀಣ ಬ್ಯಾಂಕ್‍ಗಳಲ್ಲಿ ಖಾತೆ
ಹೊಂದಿರಬೇಕು)
     ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ
ವರ್ಗದ ಅರ್ಜಿದಾರರು ನಿಗಮದ ವೆಬ್‍ಸೈಟ್ ತಿತಿತಿ.ಞmmಜ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ
ಸಂಪರ್ಕಿಸಬಹುದಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು 2022 ರ
ಜನವರಿ 10 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಿಗಮದ
ಸಹಾಯವಾಣಿ ಸಂಖ್ಯೆ: 08192-230934 ಅನ್ನು ಸಂಪರ್ಕಿಸಬಹುದೆಂದು
ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದ ಜಿಲ್ಲಾ
ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *