ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ
2021-22ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಾಗಿ
ಆರ್ಯವೈಶ್ಯ ಸಮುದಾಯ ವ್ಯಾಪ್ತಿಯಲ್ಲಿ ಬರುವ ಫಲಾಪೇಕ್ಷಿತರಿಂದ
ಅರ್ಜಿ ಆಹ್ವಾನಿಸಲಾಗಿದೆ.
ಸಾಲ ಪಡೆಯಲು ಇಚ್ಛಿಸುವವರು ಜನವರಿ 18 ರೊಳಗೆ ಅರ್ಜಿಯನ್ನು
ಆನ್ಲೈನ್ ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಸಲ್ಲಿಸಬಹುದು
ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು,
ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು.
ಅರ್ಹ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ
ಪಡೆದಿರಬೇಕು, ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು,
ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ
ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಆಧಾರ್ ಕಾರ್ಡ್
ಹೊಂದಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ
ಮತ್ತು ನಗರ ಪ್ರದೇಶದವರಿಗೆ ರೂ.3,00,000/-ಗಳ ಮಿತಿಯ
ಒಳಗಿರಬೇಕು. ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು.
ಆಧಾರ್ ಸಂಖ್ಯೆಯು ಮೊಬೈಲ್ ಸಂಖ್ಯೆಗೆ ಜೋಡಣೆಯಾಗಿರಬೇಕು.
ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು
ಅರ್ಹರು. ಈಗಾಗಲೇ ಬೇರೆ ಯಾವುದೇ ನಿಗಮಗಳ
ಯೋಜನೆಗಳಲ್ಲಿ ಅಥವಾ ಈ ನಿಗಮದಲ್ಲೇ ಈ ಹಿಂದೆ ಸಾಲ ಪಡೆದಿದ್ದಲ್ಲಿ
ಅಂತಹ ಅಭ್ಯರ್ಥಿಗಳು ಹಾಗೂ ಅವರ ಕುಟುಂಬದವರಿಗೆ ಸಾಲ ಸೌಲಭ್ಯ
ಪಡೆಯಲು ಅರ್ಹವಿರುವುದಿಲ್ಲ.
ಸಾಲ ಸೌಲಭ್ಯ ಮಂಜೂರಾತಿಯಲ್ಲಿ ಮಹಿಳೆಯರಿಗೆ ಶೇ.33 ಹಾಗೂ
ವಿಕಲಚೇತನರಿಗೆ ಶೇ.5 ರಷ್ಟು ಮೀಸಲಾತಿ ಇರುತ್ತದೆ. ಹೆಚ್ಚಿನ
ಮಾಹಿತಿಗಾಗಿ ಜಿಲ್ಲಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ಹಾಗೂ
ವೆಬ್ ಸೈಟ್ ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಪಡೆಯಬಹುದೆಂದು
ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದ ಜಿಲ್ಲಾ
ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.