ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ರಾಜ್ಯದ
ಬೆಂಗಳೂರು, ಮೈಸೂರು, ಮಡಿಕೇರಿ,
ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಈ
ಸ್ಥಳಗಳಲ್ಲಿ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್
ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದ್ದು,
ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ
ಕೋರ್ಸ್‍ಗೆ ಅರ್ಜಿ ಆಹ್ವಾನಿಸಲಾಗಿದೆ.
     ಡಿಪ್ಲೊಮಾ ಇನ್ ಕೋ-ಆಪರೇಟಿವ್
ಮ್ಯಾನೇಜ್‍ಮೆಂಟ್ ತರಬೇತಿಯನ್ನು 2022 ರ ಜನವರಿ ಮಾಹೆಯಲ್ಲಿ
ಪ್ರಾರಂಭಿಸಲಾಗುತ್ತದೆ. ಈ ತರಬೇತಿ ಸಂಸ್ಥೆಗಳ ಮೂಲಕ
ಸಹಕಾರ ಸಂಘ ಸಂಸ್ಥೆ/ ಸಹಕಾರ ಇಲಾಖೆ / ಸಹಕಾರ
ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ
ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳ
ಅವಧಿಯಾಗಿರುತ್ತದೆ. 
        ತರಬೇತಿ ಪಡೆಯಲಿಚ್ಚಿಸುವ ಅರ್ಹ ಅಭ್ಯರ್ಥಿಗಳು ಸಹಕಾರ
ಸಂಘ / ಸಹಕಾರ ಇಲಾಖೆ / ಸಹಕಾರ ಲೆಕ್ಕಪರಿಶೋಧನಾ
ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ
ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶ ಕಲ್ಪಿಸಲಾಗಿದೆ. ವಯೋಮಿತಿ
16 ವರ್ಷ ಮೀರಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ
ಅಭ್ಯರ್ಥಿಗಳಿಗೆ ಶೇಕಡ 18 ರಷ್ಟು ಸ್ಥಾನಗಳನ್ನು ತರಬೇತಿಗಾಗಿ
ಮೀಸಲಿರಿಸಲಾಗಿರುತ್ತದೆ. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಅಥವಾ
ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸಹಕಾರ ಸಂಘ
ಸಂಸ್ಥೆಗಳಲ್ಲಿ ಕನಿಷ್ಠ ಒಂದು ವರ್ಷ ಕಾಲವಾದರೂ ಸೇವೆ
ಸಲ್ಲಿಸುತ್ತಿರುವವರಾಗಿರಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ
ಅನುತ್ತೀರ್ಣರಾಗಿ, ಸಹಕಾರ ಸಂಘಗಳಲ್ಲಿ ಒಂದು ವರ್ಷಕ್ಕಿಂತ
ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ
ಪಡೆಯಲು ಅರ್ಹರಾಗಿರುತ್ತಾರೆ. ಇಂತಹ ಅಭ್ಯರ್ಥಿಗಳು ಮಾತ್ರ
ತರಬೇತಿಗೆ ಅರ್ಜಿ ಸಲ್ಲಿಸಬಹುದು. ತರಬೇತಿಯಲ್ಲಿ ಸಂಘ /
ಸಂಸ್ಥೆಯಿಂದ ಬರುವ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 400/- ಗಳ
ಶಿಷ್ಯವೇತನವನ್ನು ನೀಡಲಾಗುವುದು.
    ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ
ಅಭ್ಯರ್ಥಿಗಳಿಗೆ 6 ತಿಂಗಳು /180 ದಿನಗಳ ವಿಶೇಷ ಡಿಪ್ಲೊಮಾ
ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಹ
ನೀಡಲಾಗುವುದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ
ಪಟ್ಟಿಯನ್ನು ಆಯಾ ಜಿಲ್ಲಾ ಉದ್ಯೋಗ ವಿನಿಯಮ ಕಚÉೀರಿಯಿಂದ
ತರಿಸಿಕೊಳ್ಳಲಾಗುವುದು ಮತ್ತು ಈ ವರ್ಗದ ಅಭ್ಯರ್ಥಿಗಳು
ಆಯಾ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರ ಮೂಲಕ ಅಥವಾ
ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಸಹಕಾರ ಕೇಂದ್ರ
ಬ್ಯಾಂಕ್ ಇವರ ಮೂಲಕ ಅರ್ಜಿಗಳನ್ನು 2022 ರ ಜನವರಿ
ಮಾಹೆರೊಳಗಾಗಿ ಸಲ್ಲಿಸಬಹುದು. ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ
ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ 16 ವರ್ಷಗಳಾಗಿರಬೇಕು ಗರಿಷ್ಠ 30 ವರ್ಷಗಳು
ಮೀರಿರಬಾರದು. ಈ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 500/-
ಶಿಷ್ಯವೇತನ ನೀಡಲಾಗುವುದು.

    ಪ್ರಸಕ್ತ ತರಬೇತಿ ಅಧಿವೇಶನವು 2022 ರ ಜನವರಿ ಮಾಹೆಯಲ್ಲಿ
ಪ್ರಾರಂಭವಾಗಲಿರುತ್ತದೆ. ಡಿ.ಸಿ.ಎಂ ತರಬೇತಿಯ ಅರ್ಜಿ ಫಾರಂ
ಮತ್ತು ವಿವರಣಾ ಪುಸ್ತಕವನ್ನು ದಾವಣಗೆರೆ ಜಿಲ್ಲಾ ಸಹಕಾರ
ಒಕ್ಕೂಟ ನಿಯಮಿತ., #2532, “ಕಲಾಪ್ರಕಾಶ ವೃಂದ”, 1ನೇ ಮಹಡಿ,
ವಿನೋಬನಗರ 2ನೇ ಮುಖ್ಯರಸ್ತೆ, ದಾವಣಗೆರೆ ಈ ಸಂಸ್ಥೆಯಿಂದ
ಪಡೆಯಬಹುದು.
ಅರ್ಜಿ ಮತ್ತು ವಿವರಣಾ ಪುಸ್ತಕದ ಶುಲ್ಕ ರೂ. 100 ಗಳನ್ನು
ನಗದಾಗಿ ಪಾವತಿಸಿ ತರಬೇತಿ ಸಂಸ್ಥೆಯಲ್ಲಿ ಪಡೆಯಬಹುದು. ಅಂಚೆ
ಮೂಲಕ ಪಡೆಯಲು ಇಚ್ಚಿಸುವವರು ರೂ. 125 ಗಳ ಡಿ.ಡಿ. ಮೂಲಕ
ಪಾವತಿಸಿ ಪಡೆಯಬಹುದಾಗಿದೆ. ತರಬೇತಿಗೆ ಅರ್ಜಿ ಸಲ್ಲಿಸಲು ಡಿ.25
ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡಿ ಆಯಾ
ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸಬಹುದೆಂದು ದಾವಣಗೆರೆ
ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ
ಕೆ.ಹೆಚ್ ಸಂತೋಷ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *