ದಾವಣಗೆರೆ ಡಿ. ೧೭. ಬರುವ ಜನವರಿ ೩ ಮತ್ತು ೪ ರಂದು ಗುಲ್ಬರ್ಗದಲ್ಲಿ ನಡೆಯುವ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ೩೬ ನೇ ಸಮ್ಮೇಳನದಲ್ಲಿ ದಾವಣಗೆರೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ಭಾಗವಹಿಸಬೇಕೆಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವೀರಪ್ಪ ಎಂ ಭಾವಿ ಇವರು ಮನವಿ ಮಾಡಿದ್ದಾರೆ.
ಗುಲ್ಬರ್ಗ ಶರಣಬಸಪ್ಪ ಇವರ ಸ್ಮಾರಕ ಭವನದಲ್ಲಿ ನಡೆಯುವ ಸಮ್ಮೇಳನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಧ್ಯಕ್ಷತೆ ವಹಿಸುವರು. ಗುಲ್ಬರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ನಡೆಯುವ ಸಮ್ಮೇಳನದಲ್ಲಿ ಭಾಗವಹಿಸುವವರು ದಾವಣಗೆರೆ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಏಕಬೋಟೆ ಇವರ ಬಳಿ ಡಿಸೆಂಬರ್ ೨೪ ರೊಳಗಾಗಿ ಹೆಸರು ನೋಂದಾಯಿಸಲು ಕೋರಲಾಗಿದೆ.
ಸಮ್ಮೇಳನಕ್ಕೆ ಬರುವವರಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆಯನ್ನು ಮಾಡಿದ್ದು ಪ್ರತಿನಿಧಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಸಮ್ಮೇಳನದಲ್ಲಿ ಭಾಗವಹಿಸಬಹುದಾಗಿದೆ , ಜನೇವರಿ ೩ನೇ ತಾರೀಖಿನಂದು ಸದಸ್ಯರು ಹೆಸರು ನೋಂದಾವಣೆ, ಮಧ್ಯಾಹ್ನ. ೨ ಗಂಟೆಗೆ ರಾಜ್ಯ ಸಂಘದ ಸರ್ವ ಸದಸ್ಯರ ಮಹಾಸಭೆ ನಡೆಯಲಿದ್ದು, ದಿನಾಂಕ ೪ರ ಬೆಳಗ್ಗೆ ಉದ್ಘಾಟನೆ ಸಂಜೆ ಸಮಾರೋಪ ಹಾಗೂ ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.