ದಾವಣಗೆರೆ ಜಿಲ್ಲೆಯ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಾವಣಗೆರೆ,
ಹೊನ್ನಾಳಿ, ಜಗಳೂರು, ಚನ್ನಗಿರಿ, ಹರಿಹರ ತಾಲ್ಲೂಕಿನಲ್ಲಿ ಖಾಲಿ ಇರುವ
19 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 101 ಅಂಗನವಾಡಿ
ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಅರ್ಹ ಮಹಿಳಾ
ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗದವರು  18 ರಿಂದ
35 ವರ್ಷದೊಳಗಿನ ವಯೋಮಾನದವರಾಗಿರಬೇಕು. ಮತ್ತು
ಕಾರ್ಯಕರ್ತೆಯರ ನೇಮಕಾತಿಗೆ 18 ರಿಂದ 45 ವರ್ಷದೊಳಗಿನ
ವಯೋಮಾನದವರಾಗಿರಬೇಕು.  ವಿಕಲಚೇತನ ವರ್ಗಕ್ಕೆ
ಸಂಬಂಧಿಸಿದಂತೆ ಅರ್ಹ ಸ್ಥಳೀಯ (ಅದೇ ಗ್ರಾಮದ) ಮಹಿಳಾ
ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಂಗನವಾಡಿ ಕಾರ್ಯಕರ್ತೆಯರ
ಹುದ್ದೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ
ಸಹಾಯಕಿಯಾಗಲು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು,
ಗರಿಷ್ಠ ವಿದ್ಯಾರ್ಹತೆ 9ನೇ ತರಗತಿ ತೇರ್ಗಡೆಯಾಗಿರಬೇಕು. ಅರ್ಜಿ
ಸಲ್ಲಿಸುವವರು 2022 ರ ಜನವರಿ 18 ರ ಸಂಜೆ  5.30 ಗಂಟೆಯೊಳಗೆ
ಆನ್‍ಲೈನ್ hಣಣಠಿ://ಜಚಿvಚಿಟಿಚಿgeಡಿe.ಟಿiಛಿ.iಟಿ/ ಅರ್ಜಿ ಸಲ್ಲಿಸಬೇಕು.
 ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು
ಮಕ್ಕಳ ಅಭಿವೃದ್ದಿ ಇಲಾಖೆ ದೂ.ಸಂ: 08192-264056ನ್ನು
ಸಂಪರ್ಕಿಸಬಹುದೆಂದು ಉಪನಿರ್ದೇಶಕರಾದ ವಿಜಯಕುಮಾರ್
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *