ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಇತ್ತೀಚೆಗೆ ಎಂ.ಇ.ಎಸ್ ಪುಂಡರು ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಮಸಿ ಬಳಿದಿರುವುದನ್ನು ಹಾಗೂ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿರುವುದನ್ನು ಅಖಿಲ ಭಾರತ ವೀರಶೈವ ಮಹಾಸಭಾ ದಾವಣಗೆರೆ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿ, ಸರ್ಕಾರವು ಈ ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿ ಶಿಕ್ಷೆ ನೀಡಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಗಳ ಮುಖಾಂತರ ಮನವಿ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ದಾವಣಗೆರೆ ಜಿಲ್ಲಾಧ್ಯಕ್ಷರಾದ ಶಿವಕುಮಾರ್ ದೇವರಮನಿ, ಹಾಗೂ X MLA ಡಿ.ಜಿ. ಶಾಂತನಗೌಡರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಬಿ. ಜಿ, ರಾಷ್ಟ್ರೀಯ ಯುವ ಘಟಕದ ಉಪಾಧ್ಯಕ್ಷ ಸಂದೀಪ್ ಅಣಬೇರು, ರಾಷ್ಟ್ರೀಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ನಿಖಿಲ್ ಕೊಂಡಜ್ಜಿ, ನಗರ ಯುವ ಘಟಕದ ಅಧ್ಯಕ್ಷ ಶಂಭು ಎಸ್ ಉರೇಕೊಂಡಿ, ಜಗಳೂರು ಯುವ ಘಟಕದ ಅಧ್ಯಕ್ಷ ರಾಘವೇಂದ್ರ ಗೌಡ, ಮಹಿಳಾ ಘಟಕದ ರೇಖಾ ಶಿವಕುಮಾರ್, ಟಿಂಕರ್ ಮಂಜಣ್ಣ, ರತನ್ ಎಸ್ ಮಯೂರ್, ಕಾರ್ತಿಕ್ ಹಿರೇಮಠ, ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *