ಡಿ.28 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ವಿಶ್ವವಿದ್ಯಾನಿಲಯ
ದೃಶ್ಯಕಲಾ ಮಹಾವಿದ್ಯಾಲಯ, ಯು.ಬಿ.ಡಿ.ಟಿ ಇಂಜನಿಯರಿಂಗ್
ವಿದ್ಯಾರ್ಥಿನಿಲಯದ ಎದುರು ವಿದ್ಯಾನಗರ ದಾವಣಗೆರೆ ಇಲ್ಲಿ 75ನೇ
ಸ್ವಾತಂತ್ರ್ತದ ಅಮೃತ ಮಹೋತ್ಸವದ ಪ್ರಯುಕ್ತ ಜಿಲ್ಲಾ
ಮಟ್ಟದ ಉದ್ಯೋಗಮೇಳವನ್ನು ಏರ್ಪಡಿಸಲಾಗಿದೆ.
  ಗ್ರಾಮೀಣಾಭಿವೃದ್ದಿ ಸಚಿವಾಲಯ, ಭಾರತ ಸರ್ಕಾರ
ಕೌಶಲ್ಯಾಣಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,
ಸಂಜೀವಿನಿ ಕರ್ನಾಟಕ ಸರ್ಕಾರ ಗ್ರಾಮೀಣ ಜೀವನೋಪಾಯ ಸಂವರ್ಧನ
ಸಂಸ್ಥೆ ಮತ್ತು ಜಿಲ್ಲಾ ಪಂಚಾಯಿತಿ ದಾವಣಗೆರೆ ಇವರ
ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಿದ್ದು,
ನಗರಾಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ
ಬಸವರಾಜ(ಭೈರತಿ) ಉದ್ಘಾಟಿಸುವರು. ದಾವಣಗೆರೆ ಉತ್ತರ ವಿಧಾನಸಭಾ
ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ ಅಧ್ಯಕ್ಷತೆ ವಹಿಸುವರು.
  ಸಂಸದ ಜಿ.ಎಂ ಸಿದ್ದೇಶ್ವರ ಘನ ಉಪಸ್ಥಿತಿ ವಹಿಸುವರು. ಹೊನ್ನಾಳಿ
ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ
ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಚನ್ನಗಿರಿ ಶಾಸಕರು ಹಾಗೂ
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ
ಕೆ.ಮಾಡಾಳ್ ವಿರೂಪಾಕ್ಷಪ್ಪ, ಜಗಳೂರು ಶಾಸಕರು ಹಾಗೂ
ಕರ್ನಾಟಕ ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ
ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ, ಮಾಯಕೊಂಡ ಶಾಸಕ
ಹಾಗೂ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
ನಿಯಮಿತದ ಅಧ್ಯಕ್ಷ ಪ್ರೊ.ಎನ್.ಲಿಂಗಣ್ಣ ಉಪಸ್ಥಿತರಿರುವರು.
    ಮುಖ್ಯ ಅತಿಥಿಗಳಾಗಿ ಶಾಸಕ ಶಾಮನೂರು ಶಿವಶಂಕರಪ್ಪ,
ವಿಧಾನಪರಿಷತ್ ಸದಸ್ಯರಗಳಾದ ಜಿ.ರಘು ಆಚಾರ್, ಆರ್.ಪ್ರಸನ್ನ
ಕುಮಾರ್, ಲಹರ್‍ಸಿಂಗ್ ಸಿರೋಯಾ, ಮೋಹನ್ ಕುಮಾರ್ ಕೊಂಡಜ್ಜಿ,
ಎಸ್.ರಾಮಪ್ಪ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್,
ತೇಜಸ್ವಿನಿಗೌಡ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ,
ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಆರ್.ಶಂಕರ್.
ಮಹಾನಗರಪಾಲಿಕೆಯ ಮಹಾಪೌರ ಎಸ್.ಟಿ.ವೀರೇಶ್, ದಾವಣಗೆರೆ-ಹರಿಹರ
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವರಮನಿ ಶಿವಕುಮಾರ್,
ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪ್ರೊ ಶರಣಪ್ಪ ಹಲಸೆ, ಜಿಲ್ಲಾಧಿಕಾರಿ
ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್
ಭಾಗವಹಿಸುವರು. ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ
ಉದ್ಯೋಗ ಮೇಳಕ್ಕೆ ಆಗಮಿಸಿದ ಅಭ್ಯರ್ಥಿಗಳ ನೊಂದಣಿ
ಕಾರ್ಯಕ್ರಮವಿರುತ್ತದೆ. ನಂತರ 11 ಗಂಟೆಯಿಂದ
ಕಾರ್ಯಕ್ರಮ ಪ್ರಾರಂಭವಾಗುವುದು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *