ಹೊನ್ನಾಳಿ : ಗ್ರಾಮ ಪಂಚಾಯಿತಿಗಳ ಸಬಲೀಕರಣಕ್ಕೇ ನಮ್ಮ ಸರ್ಕಾರ ಮುಂದಾಗಿದ್ದು, ಆ ಹಿನ್ನೆಲೆಯಲ್ಲಿ ಕಟ್ಟಡ ಸೇರದಂತೆ ಮೂಲಭೂತ ಸೌಲಭ್ಯ ಕಲ್ಪಿಸುವ ಮೂಲಕ ಗ್ರಾಮ ಪಂಚಾಯಿತಿಗಳನ್ನು ಸಶಕ್ತಗೊಳಿಸುತ್ತಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
59 ಲಕ್ಷ ರೂಪಾಯಿ ವೆಚ್ಚದಲ್ಲಿ ತಾಲೂಕಿನ ಹನುಮಸಾಗರ ಗ್ರಾಮಪಂಚಾಯಿತಿಯ ನೂತನ ಕಟ್ಟಡಕ್ಕೆ, ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಜನರು ಯಾವುದೇ ಇಲಾಖೆಯ ಯೋಜನೆಯ ಸೌಲಭ್ಯಕ್ಕಾಗಿ ಜಿಲ್ಲಾ ಅಥವಾ ತಾಲೂಕು ಕೇಂದ್ರಕ್ಕೆ ಅಲೆಯುವಂತಾಗ ಬಾರದು ಸರ್ಕಾರದ ಎಲ್ಲಾ ಸೇವೆಗಳು ಸಾರ್ವಜನಿಕರಿಗೆ ಮನೆ ಬಾಗಿಲಿಗೆ ತಲುಪಿಸಲು ನಮ್ಮ ಸರ್ಕಾರ ಸನ್ನದವಾಗಿದ್ದು ಹಲವಾರು ಯೋಜನೆಗಳನ್ನು ರೂಪಿಸುತ್ತಿದ್ದು ಶೀಘ್ರದಲ್ಲೇ ಈ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದರು.
ಗ್ರಾಮ ಪಂಚಾಯಿತಿ ಸದಸ್ಯರಿಗೆ ಇಚ್ಚಾಶಕ್ತಿ ಇದ್ದರೇ ಏನು ಬೇಕಾದರೂ ಸಾಧಿಸ ಬಹುದು ಎಂಬುದಕ್ಕೆ ಹನುಮಸಾಗರ ಗ್ರಾಮ ಪಂಚಾಯತಿ ಸದಸ್ಯರೇ ಸಾಕ್ಷಿಯಾಗಿದ್ದಾರೆ ಎಂದ ರೇಣುಕಾಚಾರ್ಯ, 59 ಲಕ್ಷ ರೂಪಾಯಿ ವೆಚ್ಚದಲ್ಲಿ ಮೂರು ಅಂತಸ್ಥಿನ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು ಸಾರ್ವಜನಿಕರಿಗೆ ಇದರಿಂದ ಅನುಕೂಲವಾಗಲಿದೆ ಎಂದರು.
ನನ್ನ ಹಿಂದಿನ ಅವಧಿಯಲ್ಲಿ ನನ್ನ ಮತ ಕ್ಷೇತ್ರ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಅವಶ್ಯ ಇರುವ ಗ್ರಾ.ಪಂಗಳಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಅವಳಿ ತಾಲೂಕಿನಲ್ಲಿ ಶಿಥಿಲಗೊಂಡ ಗ್ರಾಪಂಗಳನ್ನು ಮರು ನಿರ್ಮಾಣ ಮಾಡಲಾಗುವುದು ಎಂದರು.
ಅವಳಿ ತಾಲೂಕಿನ ಅಭಿವೃದ್ದಿಗೆ ನನ್ನ ಶಕ್ತಿ ಮೀರಿ ಅನುದಾನಗಳನ್ನು ತಂದು ಅವಳಿ ತಾಲೂಕುಗಳನ್ನು ಅಭಿವೃದ್ದಿ ಮಾಡಿದ್ದೇನೆ ಎಂದ ರೇಣುಕಾಚಾರ್ಯ ಅವಳಿ ತಾಲೂಕನ್ನು ಮಾದರಿ ತಾಲೂಕುಗಳನ್ನಾಗಿ ಮಾಡಲು ಪಣ ತೊಟ್ಟಿದ್ದೇನೆ ಎಂದರು.
ಮಾತು ಎಂದು ಸಾಧನೆಯಾಗ ಬಾರದು, ಸಾಧನೆ ಮಾತಾಗ ಬೇಕು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಜನರು ಅಭಿವೃದ್ದಿಗೆ ನನ್ನ ಜೊತೆಗ ಕೈ ಜೋಡಿಸಿ ಎಂದು ಕರೆ ನೀಡಿದರು..
ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬಸಮ್ಮ, ಉಪಾಧ್ಯಕ್ಷರಾದ ಶೃತಿ ಮಂಜುನಾಥ್, ಸದಸ್ಯರಾದ ಹನುಂತಪ್ಪ ಗೌಡ್ರು, ಜಿನ್ನದತ್ತ, ಸುಬಾಷ್, ಮಂಜಪ್ಪ, ಸತ್ತೀಬಾಯಿ, ಭಾರತಿ ಬಾಯಿ, ಮಂಜಮ್ಮ, ನಾಗರಾಜ್ ನಾಯ್ಕ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪಕ್ಷದ ಮುಖಂಡರು,ಗ್ರಾಮಸ್ಥರಿದ್ದರು..