ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ
ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನದಲ್ಲಿ
ತೊಡಗಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-
1, 2ಎ, 3ಎ ಹಾಗೂ 3ಬಿ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ.
10,000/- ದಂತೆ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರು ಮಾಡಲು
ಅರ್ಜಿ ಅಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜ. 16 ರವರೆಗೆ
ವಿಸ್ತರಿಸಲಾಗಿದೆ.
ಕರ್ನಾಟಕ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ಅಧೀನಕ್ಕೆ
ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ
ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್‍ಲೈನ್ ಮೂಲಕ
ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್‍ಲೈನ್ ಅರ್ಜಿ ಪ್ರತಿ ಹಾಗೂ ಒಂದು
ಸೆಟ್ ದೃಢೀಕೃತ ದಾಖಲೆಗಳನ್ನು ಜಿಲ್ಲಾ ಹಿಂದುಳಿದ ವರ್ಗಗಳ
ಕಲ್ಯಾಣಾಧಿಕಾರಿಗಳ ಕಛೇರಿಗೆ ಜ.17 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್
hಣಣಠಿs://ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ದೂ.ಸಂ: 8050770004 ಅನ್ನು
ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.