ಹೊನ್ನಾಳಿ ; ಶಿವಮೊಗ್ಗ ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಜನವರಿ ನಾಲ್ಕರ ಮಂಗಳವಾರ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಹಿರೇಕಲ್ಮಠದ ಸಮುದಾಯ ಭವದನಲ್ಲಿ ಬೆಳಗ್ಗೆ 11 ಘಂಟೆಗೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದೆ ಎಂದರು.
ಅರುಣ್ ಅವರ ಗೆಲುವಿಗೆ ಕಾರಣಕರ್ತರಾದ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ನೂತನ ವಿಧಾನ ಪರಿಷತ್ ಸದಸ್ಯರು ಅಭಿನಂದನೆ ಸಲ್ಲಿಸುವರು ಎಂದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲದ ವತಿಯಿಂದ ನೂತನ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಅಭಿನಂದನಾ ಕಾರ್ಯಕ್ರಮದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಈ ಸಂದರ್ಭ ಪುರಸಭೆ ಅಧ್ಯಕ್ಷ ಹೋಬಳದಾರ್ ಬಾಬು, ಉಪಾಧ್ಯಕ್ಷೆ ರಂಜಿತಾ ವಡ್ಡಿ ಚನ್ನಪ್ಪ, ಮುಖಂಡರಾದ ಅರಕೆರೆ ನಾಗರಾಜ್, ಕುಬೇರಪ್ಪ, ಚಂದ್ರು, ಕೋಳಿ ಸತೀಶ್, ರಂಗಪ್ಪ ಸೇರಿದಂತೆ ಮತ್ತೀತತರಿದ್ದರು.