ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2021-22ನೇ ಸಾಲಿನಲ್ಲಿ
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅರ್ಜಿ
ಸ್ವೀಕರಿಸುವ ದಿನಾಂಕವನ್ನು ಜ. 10 ರವರೆಗೆ ವಿಸ್ತರಿಸಿದ್ದು, ಮುಸ್ಲಿಂ,
ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು
ಇದರ ಸದುಪಯೋಗ ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನವಾಗಿತ್ತು. ಆದರೆ, ವಿದ್ಯಾರ್ಥಿಗಳು
ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಮನವಿ ಮಾಡಿಕೊಂಡ
ಕಾರಣ, ಅರ್ಜಿ ಸಲ್ಲಿಸುವ ದಿನಾಂಕವನ್ನು ಜ. 10 ರವರಗೆ ವಿಸ್ತರಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್,
ಬೌದ್ಧ, ಪಾರ್ಸಿ ವಿದ್ಯಾರ್ಥಿಗಳು ಅರ್ಜಿಯನ್ನು sevಚಿsiಟಿಜhu.ಞಚಿಡಿಟಿಚಿಣಚಿಞಚಿ.ಟಿiಛಿ.iಟಿ
ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದಾಗಿದೆ. ಒಂದು ಜಿಲ್ಲೆಯ ವಿದ್ಯಾರ್ಥಿಯು
ಬೇರೊಂದು ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೆ, ವಿದ್ಯಾಭ್ಯಾಸ
ಮಾಡುತ್ತಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸಬೇಕು. ಅಗತ್ಯ ಮಾಹಿತಿ
ಮತ್ತು ದಾಖಲೆಗಳನ್ನು ಸಲ್ಲಿಸದೇ ಇದ್ದಲ್ಲಿ ಅರ್ಜಿಯನ್ನು
ತಿರಸ್ಕರಿಸಲಾಗುವುದರಿಂದ, ಅರ್ಜಿ ಸಲ್ಲಿಸುವಾಗಲೇ ವಿದ್ಯಾರ್ಥಿಗಳು
ನಿಯಮಾನುಸಾರ ಅಗತ್ಯ ಮಾಹಿತಿ ಹಾಗೂ ದಾಖಲೆಗಳನ್ನು
ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಛೇರಿ
ದೂರವಾಣಿ ಸಂಖ್ಯೆ 08192-250022 ಅಥಾವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ
ಇಲಾಖೆ, #44, ‘ಎ’ ಬ್ಲಾಕ್, 2ನೇ ಮಹಡಿ, ಜಿಲ್ಲಾಡಳಿತ ಭವನ, ಕರೂರು
ಕ್ರಾಸ್, ಹರಿಹರ ರಸ್ತೆ, ದಾವಣಗೆರೆ ಇವರನ್ನು ಸಂಪರ್ಕಿಸಲು ಪ್ರಕಟಣೆ
ತಿಳಿಸಿದೆ.