ದಾವಣಗೆರೆ,ಜ.6 ಮುಖ್ಯಮಂತ್ರಿ ಬಸವರಾಜ್ ವಿಸ್ತರಣೆಯಲ್ಲಿ ಬೊಮ್ಮಾಯಿ ದಾವಣಗೆರೆ ಜಿಲ್ಲೆಗೆ ಪ್ರಾತಿನಿಧ್ಯ ನೀಡುವುದಾದರೆ, ನನಗೆ ಮಂತ್ರಿ ಸ್ಥಾನ ನೀಡಬೇಕು. ನನ್ನನ್ನು ಬಿಟ್ಟು ಬೇರೆ ಯಾರಿಗೂ ಸಚಿವ ಸ್ಥಾನ ನೀಡಲು ಬರುವುದಿಲ್ಲ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಹೇಳಿದರು .
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ
ಸ್ಥಾನ ನೀಡಲಿ, ನೀಡದಿರಲಿ ನಾನು ಬಿಜೆಪಿ ಕಾರ್ಯಕರ್ತನಾಗಿರುತ್ತೇನೆ. ಅಕಸ್ಮಾತ್ ಸಚಿವ ಸಂಪುಟ ವಿಸ್ತರಣೆ ನಡೆದು, ಜಿಲ್ಲೆಗೆ ಪ್ರಾತಿನಿಧ್ಯ ನೀಡುವುದಾದರೆ ನನಗೇ ಸಚಿವ ಸ್ಥಾನ ನೀಡಬೇಕು. ಬೇರೆಯವರಿಗೆ ನೀಡಲು ಬರುವುದಿಲ್ಲ ಎಂದು ಹೇಳಿದರು.

ಅನಾರೋಗ್ಯದ ಕಾರಣದಿಂದ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಮಾಡುತ್ತಾರೆಂಬ ಚರ್ಚೆ ಅಪ್ರಸ್ತುತ. ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಅವಧಿ ಪೂರೈಸಲಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ರವೀಂದ್ರನಾಥ್ ಉತ್ತರಿಸಿದರು.

Leave a Reply

Your email address will not be published. Required fields are marked *