ಹೊನ್ನಾಳಿ : ವೀಕೆಂಡ್ ಕಪ್ರ್ಯೂ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಪೀಲ್ಡಿಗಿಳಿದು ಜನರಲ್ಲಿ ಕೊರೊನಾ ಜಾಗೃತಿ ಮೂಡಿಸಿದರು.
ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಅಧಿಕಾರಿಗಳೊಂದಿಗೆ ಕಾರ್ಯಾಚರಣೆಗಿಳಿದ ರೇಣುಕಾಚಾರ್ಯ ಮಾಸ್ಕ್ ಹಾಕದ ವಾಹನ ಸವಾರರಿಗೆ ಮಾಸ್ಕ್ ಹಾಕಿಕೊಳ್ಳುವಂತೆ ಜನರಿಗೆ ತಿಳಿ ಹೇಳಿದರು.
ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪಾಸಿಟೀವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ವೀಕೆಂಡ್ ಕಪ್ರ್ಯೂ ಜಾರಿ ಮಾಡಿದ್ದು ಜನರು ವೀಕೆಂಡ್ ಕಪ್ರ್ಯೂಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.


ಕೊರೊನಾ ಬಗ್ಗೆ ಯಾರೂ ಕೂಡ ನಿರ್ಲಕ್ಷವಹಿಸುವುದು ಬೇಡ ಎಂದ ರೇಣುಕಾಚಾರ್ಯ ಪ್ರತಿಯೊಬ್ಬರೂ ಕೂಡ ಸರ್ಕಾರದ ಮಾರ್ಗದರ್ಶನವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದರು.
ಕೋವಿಡ್ ಮೊದಲನೇ ಹಾಗೂ ಎರಡನೇ ಅಲೆ ಸಾಕಷ್ಟು ಸಾವು ನೋವು ಉಂಟುಮಾಡಿದ್ದು ಮನಸ್ಸಿಗೆ ಬಹಳಷ್ಟು ನೋವುಂಟು ಮಾಡಿದ್ದು ಮೂರನೇ ಅಲೆ ಬರ ಬಾರದೆಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದೇನೆ ಎಂದ ರೇಣುಕಾಚಾರ್ಯ ಪ್ರತಿಯೊಬ್ಬರೂ ಮಾಸ್ಕ್ ಹಾಕಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೊನಾದಿಂದ ದೂರ ಉಳಿಯುವಂತೆ ತಿಳಿ ಹೇಳಿದರು.
ಸರ್ಕಾರ ಜನರ ಆರೋಗ್ಯದ ದೃಷ್ಟಿಯಿಂದ ಟಫ್ ರೂಲ್ಸ್‍ಗಳನ್ನು ಜಾರಿ ಮಾಡಿದ್ದು, ಇದಕ್ಕೆ ಜನರು ಸಹಕಾರ ನೀಡಬೇಕು, ಒಂದು ವೇಳೆ ಇದನ್ನು ನಿರ್ಲಕ್ಷಿಸಿದರೇ ಅಪಾಯಕಟ್ಟಿಟ್ಟ ಬುತ್ತಿ ಎಂದು ಜನರಿಗೆ ಎಚ್ಚರಿಕೆ ನೀಡಿದರು.
ಈ ಸಂದರ್ಭ ಪುರಸಭೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಂಪಾಪತಿ, ನಾಗೇಶ್ ಸೇರಿದಂತೆ ಪುರಸಭೆ ಸಿಬ್ಬಂಧಿಗಳು, ಪೌರಕಾರ್ಮಿಕರು ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳಿದ್ದರು.

Leave a Reply

Your email address will not be published. Required fields are marked *