ಬಲಮುರಿ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ : ಆಯೋಜಕರು ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲು : ಎಸ್ಪಿ ರಿಷ್ಯಂತ
ದಾವಣಗೆರೆ.ಜ.10: ಹೊನ್ನಾಳಿ ತಾಲ್ಲೂಕಿನ ಬಲಮುರಿ ಗ್ರಾಮದಲ್ಲಿ – ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ಏರ್ಪಡಿಸಿದ್ದ ಆಯೋಜಕರ ಮೇಲೆ ಮತ್ತು ಅದಕ್ಕೆ ಚಾಲನೆ ನೀಡಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಹೇಳಿದರು. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು. ಬಲಮುರಿ ಗ್ರಾಮದಲ್ಲಿ ದುರ್ಗಾಂಬಿಕಾ ಹಬ್ಬದ ಹಿನ್ನೆಲೆ ಹೋರಿ ಬೆದರಿಸುವ ಸ್ಪರ್ಧೆ ನಡೆದಿರುವುದು ತಿಳಿದು ಬಂದಿದೆ. ಈ ಸಂಬಂಧ ಆಯೋಜಕರ ಮೇಲೆ ಪ್ರಕರಣ ದಾಖಲಿಸುತ್ತೇವೆ. ಅದರ ವಿಡಿಯೋ ಕ್ಲಿಪಿಂಗ್ಸ್ ಸಂಗ್ರಹಿಸಲಾಗಿದೆ. ಜೊತೆಗೆ ಈ ಸ್ಪರ್ಧೆ ಚಾಲನೆ ನೀಡಿದವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದರು.
ಕೊರೊನಾ ಸೋಂಕು ಉಲ್ಬಣಿಸುತ್ತಿರುವ ಹಿನ್ನೆಲೆ ಸಂತೆ, ಜಾತ್ರೆ, ಪ್ರತಿಭಟನೆ, ಜನದಟ್ಟಣೆ ಸೇರುವ ಕಾರ್ಯಕ್ರಮಗಳನ್ನು ನಿಷೇಧಿಸಿರುವ ಲಾ ಜಿಲ್ಲಾಡಳಿತ 200ಕ್ಕೂ ಹೆಚ್ಚು ಜನ ಸೇರುವ ಕಾರ್ಯಕ್ರಮಕ್ಕೆ ನಿಷೇಧ ಹಾಕಿದೆ. ಆದರೂ ಹೊನ್ನಾಳಿ ತಾಲ್ಲೂಕಿನ ಬಲಮುರಿ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಗೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗೆ ಶಾಸಕ ಎಂ.ಪಿ. ರೇಣುಕಾಚಾರ್ಯ ಚಾಲನೆ ನೀಡಿದ್ದರು. ಇದು ಜಿಲ್ಲೆಯ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾನ್ಯ ಜನರಿಗೆ ಒಂದು ನ್ಯಾಯ, ಜನಪ್ರತಿನಿಧಿಗಳಿಗೆ ಒಂದು ನ್ಯಾಯ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿರವ ಹಿನ್ನಲೆಯಲ್ಲಿ ಜಿಲ್ಲಾ ಪೋಲಿಸ್ ಇಲಾಖೆಯ ವತಿಯಿಂದ ಕಾನೂನು ರೀತಿ ಕ್ರಮ ಕೈಗೂಳ್ಳಲಾಗವುದು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ ರವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.