ಹೊನ್ನಾಳಿ : ವಿಷ ಆಹಾರ ಸೇವಿಸಿ ಐವತ್ತಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಅರಬಗಟ್ಟೆಯಲ್ಲಿರುವ ಇಂದಿರಾಗಾಂಧಿ ಪರಿಶಿಷ್ಟ ಜಾತಿ ವಸತಿ ಶಾಲೆಯಲ್ಲಿ ನಡೆದಿದೆ.
ಶುಕ್ರವಾರ ಬೆಳಗ್ಗೆ ಮಕ್ಕಳು ಬೆಳಗಿನ ಉಪಹಾರವನ್ನು ಸೇವಿಸಿದ್ದು ಮದ್ಯಾಹ್ನ ಒಬ್ಬೋಬ್ಬರಲ್ಲೇ ವಾಂತಿ ಭೇದಿ ಕಾಣಿಸಿಕೊಳ್ಳಲು ಆರಂಭವಾಗಿದೆ.
ಸಂಜೆಯಹೊತ್ತಿಗೆ ವಸತಿ ಶಾಲೆಯಲ್ಲಿನ ಐವತ್ತಕ್ಕೂ ಹೆಚ್ಚು ಮಕ್ಕಳಲ್ಲಿ ವಿಪರೀತ ವಾಂತಿ ಬೇದಿ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಹೊನ್ನಾಳಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಯಿತು.
ಐವತ್ತಕ್ಕೂ ಹೆಚ್ಚು ಮಕ್ಕಳು ಹೊನ್ನಾಳಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು ವಿಷ ಆಹಾರ ಸೇವಿಸಿ ಐವತ್ತಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಅರಬಗಟ್ಟೆಯಲ್ಲಿರುವ ಇಂದಿರಾಗಾಂಧಿ ಪರಿಶಿಷ್ಟ ಜಾತಿ ವಸತಿ ಶಾಲೆಯಲ್ಲಿ ನಡೆದಿದೆ. ಎಲ್ಲರೂ ಗುಣಮುಖರಾಗಿದ್ದಾರೆ.
ವಸತಿ ಶಾಲೆಗೆ ರೇಣುಕಾಚಾರ್ಯ ಭೇಟಿ : ಬೆಂಗಳೂರಿನಲ್ಲಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮಕ್ಕಳು ಅಸ್ಪಸ್ಥರಾಗಿರುವ ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರಿನಿಂದ ಹೊನ್ನಾಳಿ ತಾಲೂಕಿನ ಅರಬಗಟ್ಟೆಯಲ್ಲಿರುವ ವಸತಿ ಶಾಲೆಗೆ ನೇರವಾಗಿ ಆಗಮಿಸಿದರು. ವಸತಿ ಶಾಲೆಯಲ್ಲಿನ ಮಕ್ಕಳ ಆರೋಗ್ಯ ವಿಚಾರಿಸಿ ರೇಣುಕಾಚಾರ್ಯ ಮಕ್ಕಳಿಗೆ ಧೈರ್ಯ ಹೇಳಿದರು. ನಂತರ ಅಲ್ಲಿಂದ ಹೊನ್ನಾಳಿಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡದ ಶಾಸಕರು, ಮಕ್ಕಳ ಆರೋಗ್ಯ ವಿಚಾರಿಸಿದರಲ್ಲದೇ ಖುದ್ದು ಮಕ್ಕಳಿಗೆ ಔಷದೋಪಚಾರ ಮಾಡಿದರು.
ಘಟನೆ ಬಗ್ಗೆ ವರದಿ ನೀಡುವಂತೆ ಸೂಚನೆ : ವಸತಿ ಶಾಲೆಯಲ್ಲಿನ ಮಕ್ಕಳು ಆಸ್ವಸ್ಥರಾಗಲು ಕಾರಣ ಏನು ಎಂಬುದರ ಬಗ್ಗೆ ವರದಿ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ ಶಾಸಕರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ವೈದ್ಯರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ವಸತಿ ಶಾಲೆಗೆ ಪ್ರಾಂಶುಪಾಲರಿಗೆ ಎಚ್ಚರಿಕೆ ನೀಡಿದರು.