ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2021-22ನೇ ಸಾಲಿನಲ್ಲಿ
ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್,
ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ/ಮೆರಿಟ್ ಕಂ ಮೀನ್ಸ್
ವ್ಯಾಸಂಗ ಮಾಡುತ್ತಿರುವ ಹಾಗೂ ಎನ್ಎಸ್ಪಿ ನಲ್ಲಿ ಅರ್ಜಿ ಸಲ್ಲಿಸಿರುವ
ವಿದ್ಯಾರ್ಥಿಗಳಿಗೆ (ಎಸ್ಎಸ್ಪಿ) ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ನಲ್ಲಿ
ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಇದರ
ಸದುಪಯೋಗ ಪಡೆಯಲು ಇಲಾಖೆ ವೆಬ್ ಸೈಟ್ : ಜom.ಞಚಿಡಿಟಿಚಿಣಚಿಞಚಿ.gov.iಟಿ
ನಲ್ಲಿ ಪರಿಶೀಲಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಮೆಟ್ರಿಕ್
ನಂತರದ/ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನಕ್ಕೆ
hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್ ಸೈಟ್ನಲ್ಲಿ ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 31
ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ
ಅರ್ಜಿ ಸಲ್ಲಿಸಿದ ಸ್ವೀಕೃತಿ ಪತ್ರವನ್ನು ವ್ಯಾಸಂಗ ಮಾಡುತ್ತಿರುವ
ಕಾಲೇಜಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕೇಂದ್ರದ ದೂರವಾಣಿ ಸಂಖ್ಯೆ 08192-250022
ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ
ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.