ಹೊನ್ನಾಳಿ : ಬಿಜೆಪಿ ಆಡಳಿತದ ಅವಧಿಯಲ್ಲಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳನ್ನು ಸಮಗ್ರ ಅಭಿವೃದ್ದಿ ಮಾಡಲಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ 1.93 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ, ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲೂಕಿನ ಸಮಗ್ರ ಅಭಿವೃದ್ದಿ ಮಾಡುವ ಮೂಲಕ ಅವಳಿ ತಾಲೂಕಿನ ಚಿತ್ರಣವನ್ನೇ ಬದಲು ಮಾಡುವತ್ತ ಹೆಜ್ಜೆ ಇಟ್ಟಿದ್ದೇನೆ, ಎಂದ ರೇಣುಕಾಚಾರ್ಯ, ಬಿಜೆಪಿ ಆಡಳಿತ ಅವಧಿಯಲ್ಲಿ ಅವಳಿ ತಾಲೂಕುಗಳನ್ನು ಸಮಗ್ರವಾಗಿ ಅಭಿವೃದ್ದಿ ಮಾಡಿದ್ದು, ರಾಜ್ಯದಲ್ಲೇ ಅವಳಿ ತಾಲೂಕನ್ನು ಮಾದರಿ ತಾಲೂಕು ಮಾಡ ಬೇಕೆಂದು ಪಣ ತೊಟ್ಟಿದ್ದೇನೆ ಎಂದರು.
ಈಗಾಗಲೇ 518 ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ತುಂಬಿಸುವ ಯೋಜನೆ, ಹೊನ್ನಾಳಿ ನಗರದಕ್ಕೆ ಶುದ್ದಕುಡಿಯುವ ನೀರು ಪೂರೈಕೆ ಕಾಮಗಾರಿ, ಅವಳಿ ತಾಲೂಕಿನಲ್ಲಿ ಅಲಂಕಾರಿಕ ದೀಪಗಳು ಸೇರಿದಂತೆ ಸಾಕಷ್ಟು ಅಭಿವೃದ್ದಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಚಿತ್ರಣವೇ ಬದಲಾಗಲಿದೆ ಎಂದರು.
ವಿವಿಧ ಕಾಮಗಾರಿ ಉದ್ಘಾಟನೆ : ತಾಲೂಕಿನ ಎಚ್.ಕಡದಕಟ್ಟೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ 10.50 ಲಕ್ಷ ರೂಪಾಯಿ ವೆಚ್ಚದಲ್ಲಿ ಸರ್ಕಾರಿ ಶಾಲೆ ಕೊಠಡಿಗೆ ಗುದ್ದಲಿಪೂಜೆ ನೆರವೇರಿಸಿ, ಸೊರಟೂರು ಗ್ರಾಮದಲ್ಲಿ 6 ಲಕ್ಷ ರೂಪಾಯಿ ವೆಚ್ಚದ ಬಸ್ ನಿಲ್ದಾಣಕ್ಕೆ ಗುದ್ದಲಿಪೂಜೆ ನೇರವೇರಿಸಿ, 25 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಉದ್ಘಾಟಿಸಲಾಯಿತು.ಕೆಂಚಿಕೊಪ್ಪ ಗ್ರಾಮದಲ್ಲಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಪೌಂಡ್ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿದ ಶಾಸಕರು, ಆರುಂಡಿ ಗ್ರಾಮದಲ್ಲಿ 40 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ಉದ್ಘಾಟಿಸಿ, 10 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು. ಇನ್ನು ನ್ಯಾಮತಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 12 ಲಕ್ಷ ರೂಪಾಯಿ ವೆಚ್ಚದಲ್ಲಿ ಶುದ್ದನೀರಿನ ಘಟಕಕ್ಕೆ ಗುದ್ದಲಿಪೂಜೆ ನೆರವೇರಿಸಿ, ಕೊಡಚಗೊಂಡನಹಳ್ಳಿ ಗ್ರಾಮದಲ್ಲಿ 9 ಲಕ್ಷ ರೂಪಾಯಿ ವೆಚ್ಚದಲ್ಲಿ ಡ್ರೈನೇಜ್ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ, ಮಾದನಬಾವಿ ಗ್ರಾಮದಲ್ಲಿ 56 ಲಕ್ಷ ವೆಚ್ಚದಲ್ಲಿ ಜಲಜೀವನ್ ಮೀಷನ್ ಕಾಮಗಾರಿ ಸೇರಿದಂತೆ ಒಟ್ಟು 1.93 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ,ಗುದ್ದಲಿಪೂಜೆ ನೆರವೇರಿಸಿದರು.
ಕೊರೊನಾ ಬಗ್ಗೆ ಜಾಗೃತಿ ; ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕರು ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದರು. ಕೊರೊನಾ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಗ್ರಾಮೀಣ ಭಾಗದ ಜನರು ಕೊರೊನಾ ಮೂರನೇ ಅಲೆಯ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ರಾಧಮ್ಮ, ಉಪಾಧ್ಯಕ್ಷೆ ನಾಗರತ್ನಮ್ಮ ಸದಸ್ಯರಾದ ಪರಶುರಾಂರಾವ್, ವಿರುಪಾಕ್ಷಪ್ಪ, ಆಂಜನೇಯ, ಬಸವನಗೌಡ್ರು, ಮರಿಯಪ್ಪ, ಹನುಮಂತಪ್ಪ, ಸೇರಿದಂತೆ ಗ್ರಾಮದ ಮುಖಂಡರಾದ ಪಿ.ಪರಮೇಶಪ್ಪ, ಮಹಂತೇಶ್, ಕೆ.ನರಸಿಂಹಪ್ಪ, ಜಿ.ರಾಮನಗೌಡ್ರು, ಎನ್.ನಾಗೇಶ್ ರಾವ್, ಡಿ.ಹನುಮಂತಗೌಡ, ಎನ್.ಮಾಲತೇಶ್ ರಾಂ ಸೇರಿದಂತೆ ಗ್ರಾಮಸ್ಥರಿದ್ದರು.

Leave a Reply

Your email address will not be published. Required fields are marked *