ಹೊನ್ನಾಳಿ : ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಸರ್ವಾಂಗಿಣ ಅಭಿವೃದ್ದಿಗೆ ಮಾಡುವುದು ನನ್ನ ದೇಯವಾಗಿದ್ದು, ಈ ನಿಟ್ಟಿನಲ್ಲಿ ಅವಳಿ ತಾಲೂಕಿನ ಅಭಿವೃದ್ದಿಗೆ ನನ್ನನ್ನು ನಾನು ಸಮರ್ಪಿಸಿಕೊಂಡಿದ್ದೇನೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ 63.50 ಲಕ್ಷ ವೆಚ್ಚದಲ್ಲಿ ವಿವಿಧ ನೂತನ ಶಾಲೆಗಳಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ನಾನು ಅವಳಿ ತಾಲೂಕಿನ ಸೇವಕ, ನಾನು ಎಂದೂ ಕೂಡ ಮಾಲೀಕನಾಗುವುದಿಲ್ಲಾ,ಈ ನಿಟ್ಟಿನಲ್ಲಿ ಅವಳಿ ತಾಲೂಕಿನ ಅಭಿವೃದ್ದಿ ಮಾಡಲು ಸೇವಕನಾಗಿ ಕೆಲಸ ಮಾಡುತ್ತಿದ್ದಾನೆಂದರು.
ಈಗಾಗಲೇ ಅವಳಿ ತಾಲೂಕಿನಾಧ್ಯಂತ ಸಾಕಷ್ಟು ಅಭಿವೃದ್ದಿ ಕೆಲಸಗಳು ಪ್ರಗತಿಯಲ್ಲಿದ್ದು ಅವಳಿ ತಾಲೂಕುಗಳನ್ನು ಮಾದರಿ ತಾಲೂಕು ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ಅವಳಿ ತಾಲೂಕುಗಳನ್ನು ಜನರು ತಿರುಗಿ ನೋಡುವಂತೆ ಮಾಡುತ್ತೇನೆಂದರು.
ವಿವಿಧ ಕಾಮಗಾರಿಗಳ ಗುದ್ದಲಿಪೂಜೆ : ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ 10.50 ಲಕ್ಷ ರೂಪಾಯಿ ವೆಚ್ಚದಲ್ಲಿ ಶಾಲಾ ಕೊಠಡಿಗೆ ಗುದ್ದಲಿಪೂಜೆ ನೆರವೇರಿಸಿ, ಕೋಣನತಲೆ ಗ್ರಾಮದಲ್ಲಿ 10.50 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗೆ ಗುದ್ದಲಿಪೂಜೆ ನೆರವೇರಿಸಿದರು. ಅದೇ ರೀತಿ ನರಸಗೊಂಡನಹಳ್ಳಿ ಗ್ರಾಮದಲ್ಲಿ 8.50 ಲಕ್ಷ ವೆಚ್ಚದಲ್ಲಿ ಹಾಗೂ ನೇರಲಗುಂಡಿ ಗ್ರಾಮದಲ್ಲಿ 8.50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು. ಹೊಸದೇವರ ಹೊನ್ನಾಳಿ ಹಾಗೂ ಸುಂಕದಕಟ್ಟೆ ಗ್ರಾಮದಲ್ಲಿ ತಲಾ 10.50 ಲಕ್ಷ ರೂಪಾಯಿ ವೆಚ್ಚದಲ್ಲಿ ಶಾಲಾ ಕೊಠಡಿಗೆ ಗುದ್ದಲಿಪೂಜೆ ನೆರವೇರಿಸಿ, ದಿ.ಹರಳಹಳ್ಳಿ ಗ್ರಾಮದಲ್ಲಿ 4.50 ವೆಚ್ಚದ ಬಸ್ ನಿಲ್ದಾಣ ಸೇರಿದಂತೆ 63.50 ವೆಚ್ಚದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.
ಕೊರೊನಾ ಜಾಗೃತಿ : ತಾಲೂಕಿನ ಹಿರೇಗೋಣಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ 11 ಜನ ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದ್ದು ಗ್ರಾಮಕ್ಕಿಂದು ಭೇಟಿ ನೀಡಿದ ಶಾಸಕರು ಜನರಿಗೆ ಕೊರೊನಾ ಜಾಗೃತಿ ಮೂಡಿಸಿದರು. ಅದೇ ರೀತಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕರು, ಜನರಲ್ಲಿ ಕೊರೊನಾ ಜಾಗೃತಿ ಮೂಡಿಸಿದರಲ್ಲದೇ ಪ್ರತಿಯೊಬ್ಬರೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಕೊರೊನಾದಿಂದ ದೂರ ಉಳಿಯುವಂತೆ ಕರೆ ನೀಡಿದರು.
ಈ ಸಂದರ್ಭ ಬೇಲಿಮಲ್ಲೂರು ಗ್ರಾ.ಪಂ.ಅಧ್ಯಕ್ಷೆ ಸವಿತಾ ಹಾಲೇಶಪ್ಪ, ಉಪಾಧ್ಯಕ್ಷರಾದ ನಾಗರಾಜ್ ನಾಯ್ಕ, ಸದಸ್ಯರಾದ ನೀಲಮ್ಮ ಉಮೇಶ್, ಚಂದ್ರಪ್ಪ,ಹನುಮಂತಪ್ಪ ಪೂಜಾರ್,ಜಯಪ್ಪ, ಶಾಂತಬಾಯಿ, ಲಕ್ಷ್ಮೀ ಹಾಲೇಶ್, ಹಾಲಿಡೈರಿ ಅಧ್ಯಕ್ಷ ತಿಪ್ಪೇಶಪ್ಪ, ಎಸ್ಸಿ ಮೋರ್ಚ ತಾಲೂಕು ಅಧ್ಯಕ್ಷರಾದ ಉಮೇಶ್ ಸೇರಿದಂತೆ ಚಂದ್ರು ಮಾಡೇರ್, ಪ್ರವೀಣ್ ಸೇರಿದಂತೆ ಶಿಕ್ಷಕರು, ಎಸ್‍ಡಿಎಂಸಿ ಸದಸ್ಯರಿದ್ದರು.

Leave a Reply

Your email address will not be published. Required fields are marked *