ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ
ಹೊನ್ನಾಳಿ ಶಾಸಕರಾದ ಎಂ.ಪಿ. ರೇಣುಕಾಚಾರ್ಯ ಅವರು ಜ. 26
ರಂದು ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಜ.26 ರಂದು ಹೊನ್ನಾಳಿಯಿಂದ ಹೊರಟು ಬೆಳಿಗ್ಗೆ 09
ಗಂಟೆಗೆ ಹೊನ್ನಾಳಿ ಪಟ್ಟಣದ ಕ್ರೀಡಾಂಗಣದಲ್ಲಿ ನಡೆಯುವ
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ 10ಕ್ಕೆ ನ್ಯಾಮತಿ ಪಟ್ಟಣದ ಬಾಲಕಿಯರ ಪದವಿಪೂರ್ವ
ಕಾಲೇಜಿನ ಆವರಣದಲ್ಲಿ ನಡೆಯುವ ಗಣರಾಜ್ಯೋತ್ಸವ
ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆಳಗ್ಗೆ 11ಕ್ಕೆ
ಬೆಳಗುತ್ತಿ ಗ್ರಾಮದಲ್ಲಿ ಗ್ರಾಮ ಒನ್ ಕೇಂದ್ರದ ಉದ್ಘಾಟನೆ
ನೆರವೇರಿಸುವರು. ನಂತರ ಮಧ್ಯಾಹ್ನ 12ಕ್ಕೆ ಬೆನಕನಹಳ್ಳಿ
ಗ್ರಾಮದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ
ಭಾಗವಹಿಸುವರು. ನಂತರ ಮಧ್ಯಾಹ್ನ 01ಕ್ಕೆ ನೇರಲಗುಂಡಿ
ಗ್ರಾಮದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ
ಭಾಗವಹಿಸುವರು. ನಂತರ ಮಧ್ಯಾಹ್ನ 01.30ಕ್ಕೆ
ಯರೇಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆಯುವ ಧಾರ್ಮಿಕ
ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮ.02.30ಕ್ಕೆ
ತಿಮ್ಮೇಮಹಳ್ಳಿ ಗ್ರಾಮದಲ್ಲಿ ನಡೆಯುವ ಧಾರ್ಮಿಕ
ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅದೇ ದಿನ ಮ.03.15ಕ್ಕೆ
ಹೊನ್ನಾಳಿಗೆ ಪ್ರಯಾಣ ಬೆಳೆಸಿ ಸಂಜೆ 04.15ಕ್ಕೆ ದಾವಣಗೆರೆಯಲ್ಲಿ
ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ
ರಾತ್ರಿ ಅದೇ ದಿನ ಸಂಜೆ 05ಕ್ಕೆ ಬೆಂಗಳೂರಿಗೆ ಪ್ರಯಾಣ
ಬೆಳೆಸುವರು ಎಂದು ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.