ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಕ್ರೀಡಾಪಟು ವಿದ್ಯಾರ್ಥಿ-ವಿದ್ಯಾರ್ಥಿನಿಯರ ಹಾಸ್ಟೆಲ್ ನ ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ಸ್ ಕ್ರೀಡಾ ತರಬೇತುದಾರ ಬಾಳಪ್ಪ ಮಾನೆ ಮಾನಸಿಕ ಹಾಗೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದು ಈ ವಿಚಾರವಾಗಿ ಸಂಬಂಧಪಟ್ಟ ಕ್ರೀಡಾಧಿಕಾರಿಗಳಿಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಹಲವು ಬಾರಿ ಮನವಿ ನೀಡಿದರು ಈ ತರಬೇತುದಾರನ ವಿರುದ್ಧ ಕ್ರೀಡಾ ಇಲಾಖೆ ಅಧಿಕಾರಿ ಯಾವುದೇ ಕ್ರಮ ಜರುಗಿಸದೆ ಬಂದಂತಹ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಸಬೂಬು ಹೇಳಿ ಕಳಿಸುತ್ತಿದು.
ಕ್ರೀಡಾ ಹಾಸ್ಟೆಲ್ ನಲ್ಲಿ ಗ್ರಾಮೀಣ ಭಾಗದ ಕ್ರೀಡಾಪಟು ವಿದ್ಯಾರ್ಥಿಗಳು ಅತಿ ಹೆಚ್ಚಾಗಿ ಅಭ್ಯಾಸ ಮಾಡುತ್ತಿದ್ದು ತರಬೇತುದಾರರಿಂದ ಆದಂತಹ ದೌರ್ಜನ್ಯವನ್ನು ಮೇಲಧಿಕಾರಿಗಳಿಗೆ ತಿಳಿಸಿದರೆ ಆ ತರಬೇತುದಾರ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕುತ್ತಿದ್ದು
ಈ ಕೂಡಲೇ ಮಾನ್ಯ ಜಿಲ್ಲಾಧಿಕಾರಿಗಳು ತರಬೇತುದಾರರನ್ನು ಅಮಾನತು ಮಾಡುವುದರ ಜೊತೆಗೆ ಕಾನೂನು ರೀತಿ ಕ್ರಮ ಕೈಗೊಂಡು ಹಾಗೂ ನೊಂದ ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸದ ಕ್ರೀಡಾ ಇಲಾಖೆಯ ಅಧಿಕಾರಿಗಳ ವಿರುದ್ಧ ಸೂಕ್ತಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ನೊಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಯುವ ಕಾಂಗ್ರೆಸ್ ಆಗ್ರಹಿಸುತ್ತದೆ
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ ರಾಜ್ಯ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ , ಗ್ರಾಮಂತರ ಕಾಂಗ್ರೆಸ್ ಅಧ್ಯಕ್ಷ ಈಟಿ ನಿತಿನ್ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ ಕುಮಾರೇಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ ಜಿಲ್ಲಾ ಯುವ ಕಾಂಗ್ರೆಸ್ ನ ಪದಾಧಿಕಾರಿಗಳಾದ ಪುಷ್ಪ ಕ್ ಕುಮಾರ್ , ಎಂ ರಾಕೇಶ್ , ಇರ್ಫಾನ್, ರಾಜೀವ್ ರಾಯ್ಕರ್, ಕಲ್ಲೂರು ವೆಂಕಟೇಶ್ ಹಾಗೂ ನೊಂದ ವಿದ್ಯಾರ್ಥಿಗಳು ಪೋಷಕರು ಇದ್ದರು