ದಾವಣಗೆರೆ ಫೆ.06
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ
ಹಾಗೂ ಚಿಕ್ಕಮಂಗಳೂರು ಜಿಲ್ಲೆಯ ಜಿಲ್ಲಾ ಉಸ್ತುವಾರಿ
ಸಚಿವರಾದ ಕೆ.ಎಸ್ ಈಶ್ವರಪ್ಪ ಇವರು ಫೆಬ್ರವರಿ-2022
ಮಾಹೆಯಲ್ಲಿ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ.07 ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದಿಂದ ಹೊರಟು
11 ಗಂಟೆಗೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ
ಅರಕೆರೆ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡ
ಮತ್ತು ಘನತ್ಯಾಜ್ಯ ವಿಲೇವಾರಿ ಘಟಕವನ್ನು ಉದ್ಘಾಟಿಸುವರು.
ನಂತರ ಶ್ರೀರಂಗಪಟ್ಟಣಕ್ಕೆ ತೆರಳುವರೆಂದು ಅವರ ಅಪ್ತ
ಕಾರ್ಯದರ್ಶಿ ಸಿ.ಎನ್.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.