ದಾವಣಗೆರೆ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ
ಹರಿಹರ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕು ಶಿಶು ಅಭಿವೃದ್ಧಿ
ಯೋಜನೆಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ
17 ಅಂಗನವಾಡಿ ಕಾರ್ಯಕರ್ತೆ, 51 ಅಂಗನವಾಡಿ ಸಹಾಯಕಿಯರ
ಗೌರವ ಸೇವೆ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಆಯಾ
ತಾಲ್ಲೂಕಿನ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಶಿಶು ಅಭಿವೃದ್ಧಿ
ಯೋಜನಾಧಿಕಾರಿಗಳ ಕಚೇರಿ, ಹರಿಹರ- 08192-241431, ಹೊನ್ನಾಳಿ-08188-
251283 ಹಾಗೂ ಚನ್ನಗಿರಿ-08189-228010 ಕ್ಕೆ ಸಂಪರ್ಕಿಸಬಹುದು ಎಂದು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ
ವಿಜಯಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.