ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮವು 2021-22 ನೇ ಸಾಲಿನ
ಪರಿಶಿಷ್ಟ ಜಾತಿ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ
ಸಮುದಾಯಗಳ ಅಭಿವೃದ್ಧಿ ಕೋಶದ ವಸತಿ
ಯೋಜನೆಯಡಿಯಲ್ಲಿ ಫಲಾಪೇಕ್ಷಿಗಳಿಂದ ಮನೆ ನಿರ್ಮಿಸಿಕೊಳ್ಳಲು
ಅರ್ಜಿ ಆಹ್ವಾನಿಸಲಾಗಿದೆ.
ಫಲಾಪೇಕ್ಷಿಗಳು ಅರ್ಜಿಯನ್ನು ಆನ್‍ಲೈನ್ ಮೂಲಕ
ತಿತಿತಿ.ಚಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ಆಫ್‍ಲೈನ್ ಮೂಲಕ ಅರ್ಜಿ ನಮೂನೆ
ಡೌನ್‍ಲೋಡ್ ಮಾಡಿಕೊಂಡು ಅಗತ್ಯ ದಾಖಲಾತಿಗಳೊಂದಿಗೆ ನಿಗಮದ
ಜಿಲ್ಲಾ ಕಛೇರಿಯಲ್ಲಿ ಸಲ್ಲಿಸಬಹುದಾಗಿದೆ. ಆಫ್‍ಲೈನ್ ಮೂಲಕ ಅರ್ಜಿ
ಸಲ್ಲಿಸುವ ಫಲಾಪೇಕ್ಷಿಗಳು ನಿಗಮ/ಕೋಶದ ಜಿಲ್ಲಾ
ಕಛೇರಿಯನ್ನು ಸಂಪರ್ಕಿಸಿ ಉಚಿತವಾಗಿ ಅರ್ಜಿ ಪಡೆದು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಫೆ. 28 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ ಬಿ.ಆರ್. ಅಂಬೇಡ್ಕರ್
ಅಭಿವೃದ್ಧಿ ನಿಗಮ/ಪ.ಜಾತಿ ಅಲೆಮಾರಿ ಅಭಿವೃದ್ಧಿ ಕೋಶ ರವರ
ಕಛೇರಿ, ನಂ.337/16ಎ-16, ಗಣೇಶ್ ಲೇಔಟ್, 1ನೇ ಕ್ರಾಸ್, ಪಿ.ಬಿ ರಸ್ತೆ
ದಾವಣಗೆರೆ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.