ಬೆಂಗಳೂರು ನಗರದ ಫ್ರೀಡಂ ಪಾರ್ಕ ನಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ ಆಯೋಗದ ವರದಿ (ವಾಲ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ) ಜಾರಿಗೊಳಿಸಲು ಹಾಗೂ ವಾಲ್ಮೀಕಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ
ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮಿಗಳ ನೇತೃತ್ವದಲ್ಲಿ ಬೆಂಗಳೂರು ನಗರದ ಫ್ರೀಡಂ ಪಾರ್ಕ ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಇಂದು ಸನ್ಮಾನ್ಯ ಸಾರಿಗೆ ಸಚಿವರು ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಶ್ರೀರಾಮುಲು ರವರು ಭಾಗವಹಿಸಿ, ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮಿಗಳೊಂದಿಗೆ ಹಲವು ವಿಷಯಗಳ ಕುರಿತು ಚರ್ಚಿಸಿ, ಧರಣಿ ಕೈ ಬಿಡುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಸತೀಶ್ ಜಾರಕಿಹೊಳಿ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.