ನ್ಯಾಮತಿ ಪೆ -18;-ತಾಲೂಕಿನ ಬೆಳಗುತ್ತಿ ಮಲ್ಲಿಗೆನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಯಂದಿರ ಸಭೆ ಸಮೀಪದ ಬೆಳಗುತ್ತಿ ಮಲಿಗೆನಹಳ್ಳಿ ಯ ಸರ್ಕಾರಿ ಪ್ರೌಢಶಾಲೆಯಲ್ಲಿ ದಿನಾಂಕ 17 02 20 22ನೇ ಗುರುವಾರ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಜಿ ಕುಬೇರಪ್ಪ ಇವರ ಅಧ್ಯಕ್ಷತೆಯಲ್ಲಿ 20 21 22 ನೇ ಸಾಲಿನ SSLC ವಿದ್ಯಾರ್ಥಿಗಳ ತಾಯಂದಿರ ಸಭೆ ನಡೆಯಿತು ಈ ಸಭೆಯಲ್ಲಿ ಸುಮಾರು ಎಪ್ಪತ್ತೈದು ಜನ ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು ಶಾಲಾ ಹಂತದ ಪೂರ್ವ ಸಿದ್ಧತಾ ಪರೀಕ್ಷೆಯ ಮೌಲ್ಯ ಮಾಪನದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಪ್ರಗತಿಯನ್ನು ಪೋಷಕರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಚರ್ಚಿಸಿ ಲಾಯಿತು ಈ ಸಭೆಯ ಪ್ರಾರಂಭದಲ್ಲಿ ಮಾರ್ಗದರ್ಶಕ ಶಿಕ್ಷಕರಾದ ಎಸ್. ಸೋಮಶೇಖರಪ್ಪ ಇವರು ತಾಯಂದಿರ ಸಭೆಯ ಮಹತ್ವವನ್ನು ತಿಳಿಸಿದರು .


ಸುದೀರ್ಘ 4ಗಂಟೆಗಳ ಕಾಲ ಸಭೆಯಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಜಿ ಕುಬೇರಪ್ಪ ನವರು ಕಳೆದ ಎರಡು ವರ್ಷಗಳಿಂದ ಮಕ್ಕಳ ಕಲಿಕೆಯಲ್ಲಿ ಕುಂಠಿತವಾಗಿದ್ದು ತಮಗೆಲ್ಲರಿಗೂ ತಿಳಿದಿರುವ ವಿಷಯ ಈ ಕಾರಣದಿಂದ ಗುಣಾತ್ಮಕ ಫಲಿತಾಂಶಕ್ಕಾಗಿ ಮೊಬೈಲ್ ಮತ್ತು ಇನ್ನಿತರ ಚಟುವಟಿಕೆಗಳನ್ನು ಬಿಟ್ಟು ಓದಲು ತಿಳಿಸಬೇಕು ಮತ್ತು ಉತ್ತಮ ಫಲಿತಾಂಶಕ್ಕಾಗಿ ಪೋಷಕರ ಎಲ್ಲರೂ ಕೈಜೋಡಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರುಗಳು ಹಾಗೂ ಮುಖ್ಯ ಶಿಕ್ಷಕರು ಸಹ ಶಿಕ್ಷಕರೊಂದಿಗೆ ವಿದ್ಯಾರ್ಥಿಗಳಿಗೆ ಓದಲು ಪ್ರೇರೇಪಿಸುವಂತೆ ಪೋಷಕರಲ್ಲಿ ಜಾಗೃತಿ ಮೂಡಿಸಲು ಮನೆ ಮನೆ ಭೇಟಿ ನೀಡಲು ತೀರ್ಮಾನಿಸಿ ,ಸಹ ಶಿಕ್ಷಕರು ಸಿಬ್ಬಂದಿ ವರ್ಗದವರು ಭಾಗವಹಿಸಿದರು. ಮುಖ್ಯ ಶಿಕ್ಷಕರಾದ ಶ್ರೀಸಿ ತೀರ್ಥ ಲಿಂಗಪ್ಪ ಎಲ್ಲರನ್ನೂ ಸ್ವಾಗತಿಸಿದರು. ಹಿರಿಯ ಶಿಕ್ಷಕರಾದ ಶ್ರೀ ಶಿವಲಿಂಗಪ್ಪ ಬಿ ಜಾಡರ್ ನಿರೂಪಿಸಿ ಸಹಶಿಕ್ಷಕ ರಾಧ ಚನ್ನಮಲ್ಲಿಕಾರ್ಜುನ ಎಲ್ಲರನ್ನು ವಂದಿಸಿದರು.

Leave a Reply

Your email address will not be published. Required fields are marked *