ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2021-22ನೇ ಸಾಲಿನಲ್ಲಿ
ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನದಲ್ಲಿ
ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವ್ಯಾಸಂಗ
ವೇತನ, ಫೆಲೋಶಿಪ್ ಮಂಜೂರಾತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು
ಫೆ. 28 ರವರೆಗೆ ವಿಸ್ತರಿಸಲಾಗಿದೆ.
ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ
ಹಾಗೂ 3ಬಿ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ. 10,000/-
ದಂತೆ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರು ಮಾಡಲು ಅರ್ಜಿ
ಅಹ್ವಾನಿಸಲಾಗಿದ್ದು, 2021-22ನೇ ಸಾಲಿನಲ್ಲಿ ಕರ್ನಾಟಕ ಶಾಸನಬದ್ಧ ವಿಶ್ವ
ವಿದ್ಯಾಲಯಗಳಲ್ಲಿ ಅಥವಾ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ
ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ
ವಿದ್ಯಾರ್ಥಿಗಳು ಮಾತ್ರ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ
ಸಲ್ಲಿಸಲು ಫೆ.28 ರವರೆಗೆ ಅವಧಿ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು
ಆನ್‍ಲೈನ್ ಅರ್ಜಿ ಪ್ರತಿ ಹಾಗೂ ಒಂದು ಸೆಟ್ ದೃಢೀಕೃತ
ದಾಖಲೆಗಳನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ
ಕಚೇರಿಗೆ ಸಲ್ಲಿಸಲು ಮಾ.03 ಕೊನೆಯ ದಿನವಾಗಿರುತ್ತದೆ.  
    ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್
hಣಣಠಿs://ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ  ಅನ್ನು ನೋಡಬಹುದು. ಅಥವಾ
ಸಹಾಯವಾಣಿ ಸಂಖ್ಯೆ : 8050770004 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *