ಹೊನ್ನಾಳಿ-ಪೆ-21:- ಹೊನ್ನಾಳಿ ಪಟ್ಟಣದಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಾಲೂಕ ಆಫೀಸ್ ಕಚೇರಿವರೆಗೆ ಹೊನ್ನಾಳಿ ತಾಲೂಕು ಕಾಂಗ್ರೆಸ್ ಪಕ್ಷದವತಿಯಿಂದ ಬೃಹತ್ ಪ್ರತಿಭಟನೆಯನ್ನು ಮಾಜಿ ಶಾಸಕರಾದ ಡಿ ಜಿ ಶಾಂತನ ಗೌಡ್ರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರುಗಳ ನೇತೃತ್ವದಲ್ಲಿ ಸಚಿವ ಕೆಎಸ್ ಈಶ್ವರಪ್ಪನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಲಾಯಿತು.
ಬಿ ಸಿದ್ದಪ್ಪ ಮಾತನಾಡಿ ಕೆ ಎಸ್ ಈಶ್ವರಪ್ಪನವರಿಗೆ ಮಾನ ಮರ್ಯಾದೆ ಇದ್ದರೆ ಅವರ ಹರಕಲು ಬಾಯಿಯಿಂದ ರಾಷ್ಟ್ರಧ್ವಜವನ್ನು ತೆಗೆದು, ಕೇಸರಿ ಧ್ವಜವನ್ನು ಹಾಕುತ್ತೇನೆ ಎಂಬ ಹೇಳಿಕೆಯನ್ನು ಹೊನ್ನಾಳಿ ತಾಲೂಕಿನ ಕಾಂಗ್ರೆಸ್ ಪಕ್ಷವು ತೀವ್ರವಾಗಿ ಖಂಡಿಸುತ್ತೇವೆ ಎಂದು ಹೇಳಿದರು.
ಡಾ//ಈಶ್ವರ್ ನಾಯ್ಕರವರು ಮಾತನಾಡಿ, ಈ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟಿರುವುದು ಆರೆಸ್ಸೆಸ್ ಮತ್ತು ಬಿಜೆಪಿ ಪಕ್ಷವಲ್ಲ, ಈ ದೇಶದ 61000 ಮುಸಲ್ಮಾನ್ ಬಾಂಧವರು ಸ್ವತಂತ್ರವನ್ನು ತರಲಿಕ್ಕೆ ಬಲಿದಾನ ವಾಗಿದ್ದಾರೆ ಅವರ ಬಗ್ಗೆ ಬಿಜೆಪಿಯವರು ಮಾತನಾಡುತ್ತಾರೆ ,ಇಂಥ ನೀಚ ಗೆಟ್ಟ ಸರ್ಕಾರವನ್ನು ಕಿತ್ತೆಸೆಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.


ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರುರವರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ ,ಕಾಂಗ್ರೆಸ್ ಪಕ್ಷ ರಾಜ್ಯಾಧ್ಯಕ್ಷರಾದ ಡಿ, ಕೆ, ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಆದೇಶದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿ ತಾಲ್ಲೂಕುಗಳಲ್ಲಿ ಕೆ ಎಸ್, ಈಶ್ವರಪ್ಪನವರ ಹೇಳಿಕೆ ಖಂಡಿಸಿ ಪ್ರತಿಭಟನೆಯನ್ನು ಮಾಡಬೇಕು ಎಂದು ಆದೇಶಿಸಿದ್ದರು. ಅದಕ್ಕೆ ಅನುಗುಣವಾಗಿ ಹೊನ್ನಾಳಿ ತಾಲೂಕಿನಲ್ಲಿ ಬೃಹತ್ ಪ್ರತಿಭಟನೆಯನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಯಿತು. ಕೆಎಸ್ ಈಶ್ವರಪ್ಪನವರು ರಾಷ್ಟ್ರಧ್ವಜವನ್ನು ಕಿತ್ತುಹಾಕಿ. ಕೇಸರಿ ಧ್ವಜವನ್ನು ಕೆಂಪುಕೋಟೆಯ ಮೇಲೆ ಹಾರೈಸುತ್ತೇವೆ ಎಂಬ ಹೇಳಿಕೆಯನ್ನು ಖಂಡಿಸುತ್ತಾ ನಾವು ಇಂತಹ ದೇಶ ದ್ರೋಹಿಯನ್ನು ಕೂಡಲೇ ಸಚಿವ ಸ್ಥಾನದಿಂದ ತೆಗೆದು ಹಾಕಿ ಬಿಜೆಪಿ ಪಕ್ಷದಿಂದ ಅವರನ್ನು ಉಚ್ಛಾಟಿಸಬೇಕು ಎಂದು ಆಗ್ರಹಿಸುತ್ತಾ, ಈ ದೇಶದಲ್ಲಿ ಅಂಬೇಡ್ಕರ್ರವರು ಸಂವಿಧಾನವನ್ನು ರಚಿಸಿದ್ದಾರೆ. ಆ ಸಂವಿಧಾನವನ್ನೇ ಬದಲಾಯಿಸುತ್ತೇವೆ ಎನ್ನುವ ಭಂಡತನದ ಹೇಳಿಕೆಯನ್ನು ಬಿಜೆಪಿಯವರು ಹೇಳಿಕೊಂಡು ಬರುತ್ತಿದ್ದಾರೆ, ಅದೇ ರೀತಿ ಈ ರಾಜ್ಯದಲ್ಲಿ ಜಾತಿ ಜಾತಿಗಳ ಮಧ್ಯೆ, ಕೋಮುವಾದ ವಿಷ ಬೀಜವನ್ನು ಬಿತ್ತಿ, ಕೋಮುಗಲಭೆಗೆ ಕಾರಣರಾಗಿದ್ದಾರೆ, ಇದನ್ನು ನಮ್ಮ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಮತ್ತು ಮುಖಂಡರುಗಳು ಮನಗೊಂಡು ವಿಧಾನಸಭೆ ಮತ್ತು ವಿಧಾನ ಪರಿಷತ್ತು ಒಳಗಡೆ ಅಹೋರಾತ್ರಿ ಧರಣಿ, ಹಾಗೂ ರಾಜ್ಯಾದ್ಯಂತ ಪ್ರತಿ ತಾಲ್ಲೂಕುಗಳಲ್ಲಿ ಅವರ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ರಾಜ್ಯದ ಮುಖ್ಯಮಂತ್ರಿಗಳು ತಕ್ಷಣವೇ ಕೆಎಸ್ ಈಶ್ವರಪ್ಪ ನವರಿಂದ ರಾಜೀನಾಮೆ ಪಡೆದು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ತಾಲೂಕ್ ದಂಡಾಧಿಕಾರಿಗಳಾದ ಬಸವನಗೌಡ ಕೋಟೂರ್ ರವರಿಗೆ ರಾಜ್ಯಪಾಲರಿಗೆ ಮನವಿ ಪತ್ರವನ್ನು ತಲುಪಿಸುವಂತೆ ಮಾಜಿ ಶಾಸಕರಾದ ಡಿ ಜಿ ಶಾಂತನ ಗೌಡ್ರು ಮತ್ತು ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಗಳೊಂದಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಈ ಪ್ರತಿಭಟನೆಯ ಉಪಸ್ಥಿತಿಯಲ್ಲಿ ಮಾಜಿ ಶಾಸಕರಾದ ಡಿ ಜಿ ಶಾಂತನ ಗೌಡ್ರು ,ಸಾಸವಳ್ಳಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಗದಿಗೇಶಣ್ಣ, ಡಾಕ್ಟರ, ಎಲ್, ಈಶ್ವರ ನಾಯ್ಕ. ಬಿ ಸಿದ್ದಪ್ಪ ಚಿಲೂರ್ ಮಜಿದ್. ಆರ್ ನಾಗಪ್ಪ. ಲೋಕೇಶಪ್ಪ ನ್ಯಾಮತಿ ಮತ್ತು ಅವಳಿ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರುಗಳು. ಕಾರ್ಯಕರ್ತರುಗಳು ಹಾಗೂ ಯುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು. ಉಪಾಧ್ಯಕ್ಷರುಗಳು. ಮಾಜಿ ಅಧ್ಯಕ್ಷರುಗಳು. ಕಾರ್ಯದರ್ಶಿಗಳು ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳು ಸಹ ಭಾಗಿಯಾಗಿದ್ದರು

Leave a Reply

Your email address will not be published. Required fields are marked *