ದಾವಣಗೆರೆ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಅನೈರ್ಮಲ್ಯ
ಶೌಚಾಲಯಗಳ ಸಮೀಕ್ಷೆಯನ್ನು ಗ್ರಾಮ ಪಂಚಾಯತಿ
ಹಂತದಲ್ಲಿ ನಡೆಸಿದ್ದು, ಗ್ರಾಮ ಸಭೆಗಳ ಮೂಲಕ ಸಮೀಕ್ಷೆ
ವರದಿಗೆ ಅನುಮೋದನೆ ಪಡೆಯಲಾಗಿದೆ. ಸಮೀಕ್ಷಾ ವರದಿಗೆ
ಸಂಬಂಧಿಸಿದಂತೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ಅನೈರ್ಮಲ್ಯ ಶೌಚಾಲಯಗಳ
ಸಮೀಕ್ಷೆಯಲ್ಲಿ ಯಾವುದೇ ಅನೈರ್ಮಲ್ಯ ಶೌಚಾಲಯಗಳು
ಕಂಡುಬಂದಿರುವುದಿಲ್ಲವೆಂದು ಜಿಲ್ಲೆಯ 195 ಗ್ರಾಮ
ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ದೃಢೀಕರಣ
ನೀಡಿರುತ್ತಾರೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಳೆದ 2021 ರ
ಡಿಸೆಂಬರ್ 23ರಂದು ಮ್ಯಾನ್ಯುಯಲ್ ಸ್ಕ್ಯಾವೆಂಜಿಗ್ ನೇಮಕಾತಿ ನಿμÉೀಧ
ಮತ್ತು ಪುನರ್ವಸತಿ ಕಾಯ್ದೆ-2013ರ ಅನುμÁ್ಠನ ಸಮಿತಿ
ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಅನುಮೋದಿಸಲಾಗಿದೆ.
ಅನೈರ್ಮಲ್ಯ ಶೌಚಾಲಯಗಳ ಸಮೀಕ್ಷಾ ವರದಿಗೆ
ಸಂಬಂಧಿಸಿದಂತೆ ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಲಾಗಿದ್ದು,
ಆಕ್ಷೇಪಣೆ ಅರ್ಜಿಯನ್ನು ಸ್ವಚ್ಛ ಭಾರತ ಮಿಷನ್ (ಗ್ರಾ) ಜಿಲ್ಲಾ
ನೆರವು ಘಟಕ, ಜಿಲ್ಲಾ ಪಂಚಾಯತ್, ದಾವಣಗೆರೆ ಇವರಿಗೆ
ಫೆ.25ರೊಳಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ
ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *