ಹೊನ್ನಾಳಿ ಪ್ರಬ್ರವರಿ 25 ಹೊನ್ನಾಳಿ ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಲ್ಲಿ ಇಂದು ತಾಲೂಕು ಬಿಜೆಪಿ ಅಧ್ಯಕ್ಷರಾದ ಜೆ ಕೆ ಸುರೇಶ್ ರವರು ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು.
ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಜೆಕೆ ಸುರೇಶ್ ರವರು ನಂತರ ಮಾತನಾಡಿ, ಹೊನ್ನಾಳಿ ತಾಲೂಕು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಂಡಲ ಹಾಗೂ ಶಾಸಕರಾದ ಎಂ ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ನಾಳೆ ದಿನಾಂಕ 26/ 2/20 22 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಸರಿಯಾಗಿ ಕಾಂಗ್ರೆಸ್ ಪಕ್ಷದ ಜನ ವಿರೋಧಿ ನೀತಿಯ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಆದ ಕಾರಣ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನ ಬಿಜೆಪಿ ಮುಖಂಡರುಗಳು, ತಾಲ್ಲೂಕು ಘಟಕದ ಸದಸ್ಯರುಗಳು, ಮಹಿಳಾ ಮೋರ್ಚಾ ಸದಸ್ಯರುಗಳು, ಮುಖಂಡರುಗಳು ಹಾಗೂ ಪದಾಧಿಕಾರಿಗಳು ಮತ್ತು ಬಿಜೆಪಿ ಕಾರ್ಯಕರ್ತಗಳು ನೂರಾರು ಸಂಖ್ಯೆಯಲ್ಲಿ ಸೇರಿ, ಈ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡುರು.
ಉಪಸ್ಥಿತಿಯಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷರಾದ ಜೆಕೆ ಸುರೇಶ್, ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಕೆವಿ ಚನ್ನಪ್ಪ ,ಕೊನಾಯ್ಕನಳ್ಳಿ ಮಂಜುನಾಥ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಂಜುನಾಥ್, ಬಿಜೆಪಿ ಮುಖಂಡ ಕುಬೇರಪ್ಪ ಇನ್ನು ಮುಂತಾದವರು ಸಹ ಭಾಗಿಯಾಗಿದ್ದರು.