ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರಿಗೆ ಇತ್ತೀಚಿನ ದಿನಗಳಲ್ಲಿ ಸರ್ಕಾರ ಜಾರಿಗೆ ತಂದಿರುವ ಆದೇಶಗಳು ಮಾರಕವಾಗಿವೆ. ಅವುಗಳ ವಿರುದ್ಧ ಸಂಘಟಿತ ಹೋರಾಟವನ್ನು ನಾವು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ದಿನಾಂಕ 4;3;22 ಶುಕ್ರವಾರ ಹಮ್ಮಿಕೊಂಡಿದ್ದೇವೆ. ಈ ಹೋರಾಟದಲ್ಲಿ ತಾಲ್ಲೂಕಿನ ಎಲ್ಲಾ ಅನುದಾನಿತ ಶಾಲಾ ಕಾಲೇಜುಗಳ ಶಿಕ್ಷಕರು ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದೇವೆ.
:: ನಮ್ಮ ಬೇಡಿಕೆಗಳು ::

  1. ದಿ: 01.04.2006ಕ್ಕೂ ಮೊದಲು ನೇಮಕವಾಗಿ ನಂತರ ಅನುದಾನಕ್ಕೊಳಪಟ್ಟು ಹಾಲಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ
    ನಿವೃತ್ತರಾಗಿರುವ ನೌಕರರ ಸೇವಾ ಅವಧಿಯನ್ನು ಕಾಲ್ಪನಿಕವಾಗಿ ಪರಿಗಣಿಸಿ “ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ” ನೀಡುವುದು.
  2. ದಿ: 01.04.2006ರ ನಂತರ ನೇಮಕವಾದ ನೌಕರರಿಗೆ “ನೂತನ ಪಿಂಚಣಿ ಯೋಜನೆ”ಯನ್ನು ಸರ್ಕಾರಿ ನೌಕರರಿಗೆ ನೀಡುತ್ತಿರುವಂತೆ ಯಥಾವತ್ತಾಗಿ ನೀಡುವುದು.
  3. ದಿ: 01.04.2006ರ ನಂತರ ನೇಮಕವಾದ ನೌಕರರಿಗೆ “ನೂತನ ಪಿಂಚಣಿ ಯೋಜನೆ” ಜಾರಿಗೆ ತರಲು ಸರ್ಕಾರವು ನೌಕರರ ಪಾಲಿನ ಶೇಕಡ 14 ರಷ್ಟು ಹಣವನ್ನು ಆಡಳಿತ ಮಂಡಳಿಗೆ ನೀಡುವಂತೆ ಹೇಳಲಾಗಿದೆ.
  4. ಅನುದಾನಿತ ಶಾಲಾ ಕಾಲೇಜು ನೌಕರರಿಗೂ ಆರೋಗ್ಯ ಸಿರಿ (ಜ್ಯೋತಿ ಸಂಜೀವಿನಿ) ಯೋಜನೆಯನ್ನು ಜಾರಿಗೆ ತರುವುದು. ಖಾಲಿ ಹುದ್ದೆಗಳನ್ನು ತುಂಬಿಕೊಳ್ಳಲು ವಿಧಿಸಿರುವ ನಿಯಮಗಳನ್ನು ಸಡಿಲಗೊಳಿಸಿ ಹುದ್ದೆಗಳನ್ನು ತುಂಬಲು ಅವಕಾಶ ಕಲ್ಪಿಸುವುದು.
  5. ಅನುದಾನಿತ ಶಾಲಾ ಮಕ್ಕಳಿಗೂ ಸರ್ಕಾರಿ ಶಾಲಾ ಮಕ್ಕಳಿಗೆ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನು ಯಥಾವತ್ತಾಗಿ ನೀಡುವುದು.ಮಾನ್ಯತೆ ನವೀಕರಣವನ್ನು ಸರಳೀಕರಿಸುವುದು.
  6. 2000ರ ಹಿಂದೆ ನೇಮಕಾತಿ ಹೊಂದಿ ಅನುಮೋದನೆಯಾಗದೆ ಉಳಿದಿರುವ ಕೆಲವೇ ಮಂದಿ ಡಿಗ್ರೂಪ್ ನೌಕರರನ್ನು ಖಾಯಂಗೊಳಿಸುವುದು.
  7. ಶಿಕ್ಷಕರ ಮತ್ತು ಮಕ್ಕಳ ಅನುಪಾತವನ್ನು ಆರ್.ಟಿ.ಇ ಆಕ್ಟ್ರಂತೆ ನಿಗದಿಪಡಿಸುವುದು.ಇವುಗಳು ನಮ್ಮ ಬೇಡಿಕೆಯಾಗಿರತ್ತದೆ ಎಂದು ತಾಲೂಕ ಅಧ್ಯಕ್ಷರು ಪದಾಧಿಕಾರಿಗಳು ಸೇರಿದಂತೆ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

Leave a Reply

Your email address will not be published. Required fields are marked *