ರೇಣುಕಾಚಾರ್ಯ ಅವರ 60 ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಸೇಫ್ ಫೌಡೇಷನ್‍ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನನ್ನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸೇಫ್ ಫೌಂಡೇಷನ್ ಅವರು ಸ್ವಯಂ ಪ್ರೇರಣೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದು ನಾನು ಅವರಿಗೆ ಚಿರಋಣಿ ಎಂದ ರೇಣುಕಾಚಾರ್ಯ, ಸಾರ್ವಜನಿಕರು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಕಿವಿ ಮಾತು ಹೇಳಿದರು.
ಮನುಷ್ಯನಿಗೆ ಆರೋಗ್ಯ ಅತ್ಯಂತ ಅಮೂಲ್ಯವಾದದ್ದು, ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚಿನ ಒತ್ತು ನೀಡುವಂತೆ ಕಿವಿ ಮಾತು ಹೇಳಿದ ರೇಣುಕಾಚಾರ್ಯ ಸಾರ್ವಜನಿಕರು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ ಎಂದರು.
ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಜನರ ಅನುಕೂಲಕ್ಕಾಗಿ ಬೆಂಗಳೂರಿನ ವೈದ್ಯರ ತಂಡ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದು ಜನರು ಇದರ ಸದುಪಯೋಗ ಪಡೆದುಕೊಂಡ ಆರೋಗ್ಯ ಕಾಪಾಡಿಕೊಳ್ಳಿ ಎಂದರು.
ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಬಡವರು ಮಧ್ಯಮ ವರ್ಗದವರಿಗೆ ವರದಾನವಾಗಿದೇ ಎಂದ ರೇಣುಕಾಚಾರ್ಯ ಇಂದಿನ ಒತ್ತಡದ ಜೀವನದಲ್ಲಿ ಆರೋಗ್ಯದ ಕಡೆ ಕಾಳಜಿ ವಹಿಸದೇ ಇರುವುದರಿಂದ ಅನೇಕ ಕಾಯಿಲೆಗಳಿಗೆ ಜನರು ತುತ್ತಾಗುತ್ತಿದ್ದು, ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ತಿಳಿ ಹೇಳಿದರು.
ನಾವು ಆರೋಗ್ಯವಾಗಿದ್ದರೇ ಮಾತ್ರ ಏನನ್ನಾದರೂ ಸಾಧಿಸ ಸಾಧ್ಯ ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳಿ ಎಂದರು.
ಈ ಸಂದರ್ಭ ಬೆಂಗಳೂರಿನ ವೈದ್ಯರಾದ ಡಾ||ಸಂಗಮೇಶ್, ಡಾ||ಹರ್ಷಿತಾ, ಡಾ||ಚಂದ್ರಶೇಖರ್,ಡಾ|| ವೆಂಕಟಗಿರೀಶ್, ಅಶ್ವರ್, ಸುಮಾ ಎಂ.ಪಿ.ರೇಣುಕಾಚಾರ್ಯ, ಕಿಟ್ಟಪ್ಪ ಸೇರಿದಂತೆ ಸೇರಿದಂತೆ ಮತ್ತೀತತರಿದ್ದರು.