ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ
ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ
ನಿಲಯಗಳಿಗೆ 2021-22ನೇ ಸಾಲಿನಲ್ಲಿ ಹೊಸದಾಗಿ ಪ್ರವೇಶ ಬಯಸುವ
ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾ.14 ರವರೆಗೆ
ವಿಸ್ತರಿಸಿ ಅವಕಾಶ ಕಲ್ಪಿಸಲಾಗಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಿ ಅಂತಿಮ
ದಿನಾಂಕ ಮುಕ್ತಯವಾದ ಕಾರಣ ಪ್ರವೇಶ ಪಡೆಯದ
ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ಮತ್ತು ವೃತ್ತಿಪರ
ವಿದ್ಯಾರ್ಥಿಗಳಿಗೆ ತಡವಾಗಿ ಪ್ರವೇಶ ಪ್ರಕ್ರಿಯೆ
ಪ್ರಾರಂಭವಾಗಿರುವುದರಿಂದ, ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಅರ್ಜಿ
ಸಲ್ಲಿಸಲು ಅವಕಾಶ ದೊರಕದ ಹೊಸ ವಿದ್ಯಾರ್ಥಿಗಳಿಗೆ, ಜಿಲ್ಲೆಗಳಲ್ಲಿ
ಖಾಲಿ ಸ್ಥಾನಗಳು ಉಳಿಕೆಯಾಗಿರುವ ವಿದ್ಯಾರ್ಥಿನಿಲಯಗಳಿಗೆ ಮಾತ್ರ
ಅನ್ವಯಿಸುವ ಅರ್ಜಿ ಸಲ್ಲಿಸಲು ತಾಲ್ಲೂಕು ಕಲ್ಯಾಣ ಅಧಿಕಾರಿಗಳ
ಲಾಗಿನ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ
ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.