ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ
ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ-ದಾವಣಗೆರೆ ಇವರ
ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ
ಮಟ್ಟದ &quoಣ;ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು 2021-22
ರ ಉದ್ಘಾಟನಾ ಸಮಾರಂಭ ಮಾ.21 ರಂದು ಬೆಳಿಗ್ಗೆ 10 ಗಂಟೆಗೆ
ನಗರದಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ
ಸಚಿವರಾದ ಬಿ.ಎ ಬಸವರಾಜ ಉದ್ಘಾಟಿಸಲಿದ್ದಾರೆ. ದಾವಣಗೆರೆ ಉತ್ತರ
ವಲಯದ ಶಾಸಕ ಎಸ್.ಎ ರವೀಂದ್ರನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದ ಡಾ. ಜಿ.ಎಂ ಸಿದ್ದೇಶ್ವರ, ಹೊನ್ನಾಳಿ ಶಾಸಕರು  ಹಾಗೂ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ
ರೇಣುಕಾಚಾರ್ಯ, ಚನ್ನಗಿರಿ ಶಾಸಕರು ಹಾಗೂ  ಕರ್ನಾಟಕ ಸಾಬೂನು
ಮತ್ತು ಮಾರ್ಜಕ ನಿಯಮಿತ ಬೆಂಗಳೂರು ಅಧ್ಯಕ್ಷ ಕೆ.
ಮಾಡಾಳ್ ವಿರುಪಾಕ್ಷಪ್ಪ, ಜಗಳೂರು ಶಾಸಕರು ಹಾಗೂ ಕರ್ನಾಟಕ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ
ಅಧ್ಯಕ್ಷ ಎಸ್.ವಿ ರಾಮಚಂದ್ರ, ಮಾಯಕೊಂಡ ಶಾಸಕರು ಹಾಗೂ
ಡಾ||ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ
ಅಧ್ಯಕ್ಷ ಪೆÇ್ರ. ಎನ್. ಲಿಂಗಣ್ಣ, ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ
ಮುಖ್ಯ ಸಚೇತಕರಾದ ಡಾ. ವೈ. ಎ ನಾರಾಯಣಸ್ವಾಮಿ, ದಾವಣಗೆರೆ ದಕ್ಷಿಣ
ವಲಯದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಹರಿಹರ
ಶಾಸಕ ಎಸ್.ರಾಮಪ್ಪ ರವರು ಉಪಸ್ಥಿತರಿರುವರು ಮತ್ತು ಮುಖ್ಯ
ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯರುಗಳು ಸೇರಿದಂತೆ ವಿವಿಧ
ಹಿರಿಯ ಅಧಿಕಾರಿಗಳು, ನೌಕರರ ಸಂಘದ ಪದಾಧಿಕಾರಿಗಳು,
ಗಣ್ಯರು ಹಾಜರಿರುವರು.
ಕಾರ್ಯಕ್ರಮದ ಅಂಗವಾಗಿ ಪೂಜಾ ಕುಣಿತ, ಕಂಸಾಳೆ,
ಜನಪದ ಸಂಗೀತ, ಡೊಳ್ಳು ಕುಣಿತ, ನಾಸಿಕ್ ಡೋಲ್  ಸೇರಿ ಹಲವು
ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮದ
ಸಮಾರೋಪ ಸಮಾರಂಭ ಮಾ.22 ರಂದು ಮಂಗಳವಾರ ಸಂಜೆ 5
ಗಂಟೆಗೆ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆಯಲಿದೆ
ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *