ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ
ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯಲ್ಲಿನ ವಸತಿ ಶಾಲೆಗಳ
ಪ್ರವೇಶಕ್ಕೆ ಸಿಇಟಿ ಮಾದರಿಯಲ್ಲಿ ಮಾ.20 ರಂದು ಪ್ರವೇಶ ಪರೀಕ್ಷೆ
ನಡೆಸಲಾಗುತ್ತಿದ್ದು, ಯಾವುದೇ ಲೋಪದೋಷಗಳಾಗದ
ರೀತಿಯಲ್ಲಿ ವ್ಯವಸ್ಥಿತವಾಗಿ ಪರೀಕ್ಷೆ ಜರುಗಿಸಬೇಕು ಎಂದು ಪ್ರಭಾರ
ಅಪರ ಜಿಲ್ಲಾಧಿಕಾರಿ ನಜ್ಮಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳುವ
ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ
ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು
ಮಾತನಾಡಿದರು.
ಸರ್ಕಾರದ ಸೂಚನೆಯಂತೆ ವಸತಿ ಶಾಲೆಗಳಲ್ಲಿ ಪ್ರವೇಶ
ಪಡೆಯಲು ಸಿಇಟಿ ಮಾದರಿಯಲ್ಲಿ ಪ್ರವೇಶ ಪರೀಕ್ಷೆ ನಡೆಸಲು
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕ್ರಮ ಕೈಗೊಂಡಿದೆ. ಜಿಲ್ಲೆಯಲ್ಲಿ
ಒಟ್ಟು 4104 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು,
ಪರೀಕ್ಷೆಯನ್ನು ಸುರಕ್ಷತಾ ಕ್ರಮಗಳೊಂದಿಗೆ ಅಚ್ಚುಕಟ್ಟಾಗಿ
ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾ. 20 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1
ಗಂಟೆಯವರೆಗೆ ಪ್ರವೇಶ ಪರೀಕ್ಷೆ ಜರುಗಲಿದ್ದು, ಪರೀಕ್ಷಾ
ದಿನದಂದು ನಿಗದಿತ ಸಮಯದ ಒಳಗಾಗಿ ಪರೀಕ್ಷಾ ಕೇಂದ್ರಗಳಿಗೆ
ಪ್ರಶ್ನೆಪತ್ರಿಕೆ ತಲುಪುವಂತಾಗಬೇಕು, ವಿದ್ಯಾರ್ಥಿಗಳಿಗೆ ಒಎಂಆರ್
ಶೀಟ್ ಮತ್ತು ಬುಕ್‍ಲೆಟ್‍ಗೆ ಸಂಬಂಧಿಸಿದಂತೆ ಪರೀಕ್ಷೆಗೆ ಬರೆಯಲು
ಯಾವ ಬಣ್ಣದ ಪೆನ್‍ಗಳನ್ನು ಬಳಸಬೇಕು ಎಂಬುದನ್ನು ಪರೀಕ್ಷಾ
ಕೇಂದ್ರದವರು ಮಾಹಿತಿ ನೀಡಬೇಕು. ಪರೀಕ್ಷಾ ಕೇಂದ್ರದ ಸುತ್ತ
ಸೆಕ್ಷನ್ 144 ನಿμÉೀಧಾಜ್ಞೆ ಜಾರಿಗೊಳಿಸಲಾಗಿದ್ದು, ಪರೀಕ್ಷೆಯಲ್ಲಿ
ಯಾವುದೇ ಅಕ್ರಮ ನಡೆಯದಂತೆ ಕಟ್ಟುನಿಟ್ಟಾಗಿ
ನಿಯಮಗಳಲ್ಲಿ ಪಾಲಿಸಬೇಕು ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವರಾಜ್.ಎಂ
ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 4104 ವಿದ್ಯಾರ್ಥಿಗಳು ಪ್ರವೇಶ
ಪರೀಕ್ಷೆಗೆ ಹಾಜರಾಗಲಿದ್ದು, ಪರೀಕ್ಷೆಯನ್ನು ಸುಗಮವಾಗಿ
ನಡೆಸಲು ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಜಗಳೂರು ಮತ್ತು
ಹರಿಹರದಲ್ಲಿ ತಲಾ 02 ರಂತೆ ಒಟ್ಟು 10 ಪರೀಕ್ಷಾ ಕೇಂದ್ರಗಳನ್ನು
ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು,
ವೀಕ್ಷಕರು, ಮಾರ್ಗಾಧಿಕಾರಿಗಳು, ಸೇರಿದಂತೆ ವಿವಿಧ ಕಾಲೇಜುಗಳ
ಪ್ರಾಚಾರ್ಯರು ಭಾಗವಹಿಸಿದ್ದರು.