ಹೊನ್ನಾಳಿ :ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಿಗೆ ತಲಾ ಒಂದು ಕನ್ನಡ ಭವನ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಕೇಳಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ 2021-26ರ ಅವಧಿಯ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಸೇವಾ ಸ್ವೀಕಾರ ಸಮಾರಭ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ.ಸುನಿಲ್‍ಕುಮಾರ್ ಅವರು ರೂ.1ಕೋಟಿ ಅನುದಾನ ಕೊಡುತ್ತೇನೆ ಎಂದು ಹೇಳಿದ್ದರು. ನಾನು ಒತ್ತಾಯ ಮಾಡಿ ತಾಲೂಕಿಗೊಂದು ಕೋಟಿಯಂತೆ 2 ಕೋಟಿ ಅನುದಾನ ನೀಡಿ ಎಂದು ಮನವಿ ಮಾಡಿದಾಗ ಅದಕ್ಕೆ ಸಚಿವರು ಒಪ್ಪಿದ್ದಾರೆ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ನೂತನ ಅಧ್ಯಕ್ಷರಾಗಿ ಜಿ.ಮುರುಗೆಪ್ಪಗೌಡ ನಿಕಟ ಪೂರ್ವ ಅಧ್ಯಕ್ಷ ಎಂ.ಎಸ್.ರೇವಣಪ್ಪ ಅವರಿಂದ ಅಧಿಕಾರ ಸ್ವೀಕಾರ ಮಾಡಿದರು.
ಇದೇ ಸಂದರ್ಭದಲ್ಲಿ ಸಾಹಿತಿ ಯು.ಎನ್.ಸಂಗನಾಳಮಠ ಸಂಕಲನ ಮಾಡಿದ ಪ್ರೇಮಕುಮಾರ್ ಭಂಡಿಗಡಿ ಅವರ ಬದುಕು-ಬರಹ ಸಂಕಲನವನ್ನು ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಎಸ್.ರುದ್ರೇಶ್ ಬಿಡುಗಡೆ ಮಾಡಿದರು.
ಸಂಕಲನ ಕೃತಿ ಬಗ್ಗೆ ನಿವೃತ್ತ ಉಪನ್ಯಾಸಕ ಕೆ.ಸಿದ್ದಪ್ಪ ಮಾತನಾಡಿದರು.
ಉಪ ವಿಭಾಗಾಧಿಕಾರಿ ತಿಮ್ಮಣ್ಣ ಹುಲುಮನಿ ಮಾತನಾಡಿದರು.
ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಅಧ್ಯಕ್ಷತೆ ವಹಿಸಿದ್ದರು.
ನಿವೃತ್ತ ಶಿಕ್ಷಣಾಧಿಕಾರಿ ಭರ್ಮಪ್ಪ ಮೈಸೂರು ಉಪನ್ಯಾಸ ನೀಡಿದರು.
ಶಿಕ್ಷಕ ಚಂದ್ರಪ್ಪ ಸ್ವಾಗತಿಸಿದರು. ಕಸಾಪ ತಾಲೂಕು ಮಾಜಿ ಅಧ್ಯಕ್ಷ ಕೆ.ರುದ್ರಪ್ಪ ಪ್ರಾಸ್ತಾವಿಕ ಮಾತನಾಡಿದರು.
ನ್ಯಾಮತಿ ತಾಲೂಕು ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಕುಮಾರ್ ಇತರರು ಉಪಸ್ಥಿತರಿದ್ದರು.