ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾ. 29 ರಂದು
ಹರಿಹರ ತಾಲ್ಲೂಕುಗೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲು
ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಂಡಿರುತ್ತಾರೆ. ಸಾರ್ವಜನಿಕರು
ತಮ್ಮ ದೂರು, ಅಹವಾಲುಗಳನ್ನು ಈ ಸಂದರ್ಭದಲ್ಲಿ
ಸಲ್ಲಿಸಬಹುದಾಗಿದೆ.
ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್
ಕೌಲಾಪೂರೆ ಅವರು ಮಾ.29 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30
ರವರೆಗೆ ಹರಿಹರ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ದೂರು,
ಅಹವಾಲುಗಳನ್ನು ಸ್ವೀಕರಿಸುವರು, ಸಾರ್ವಜನಿಕರು ತಮ್ಮ
ದೂರುಗಳನ್ನು ಪ್ರಪತ್ರ-1 ಮತ್ತು 2 ರಲ್ಲಿ ಅಫಿಡವಿಟ್‍ನೊಂದಿಗೆ
ಸಲ್ಲಿಸಬಹುದು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ ಅಂತಹ
ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ
ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.