ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಮಾ. 28 ರಿಂದ ಏ. 11
ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಅಚ್ಚುಕಟ್ಟಾಗಿ ಹಾಗೂ
ವ್ಯವಸ್ಥಿತವಾಗಿ ಜರುಗಿಸುವ ಸಂಬಂಧ ಪೂರ್ವಭಾವಿ ಸಭೆ ಮಾ. 24
ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದ
ತುಂಗಭದ್ರಾ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಅವರು ವಹಿಸುವರು. ಸಭೆಯಲ್ಲಿ ಪರೀಕ್ಷೆ ಜರುಗುವ ಎಲ್ಲ 90
ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ತಾಲ್ಲೂಕು
ನೋಡಲ್ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು
ಭಾಗವಹಿಸುವರು ಎಂದು ಡಿಡಿಪಿಐ ಜಿ.ಆರ್. ತಿಪ್ಪೇಶಪ್ಪ ತಿಳಿಸಿದ್ದಾರೆ.